ಸದ್ಯಕ್ಕೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ
ಹೊಸನಗರ: ಸದ್ಯಕ್ಕೆ ಯಾವುದೇ ಪಕ್ಷ ಸೇರದೆ ತಟಸ್ಥವಾಗಿ ಉಳಿಯುತ್ತೇನೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಬೆಂಬಲಿಸುವ ಬಗ್ಗೆ ಮಾರ್ಚ್ 20ರ ನಂತರ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ ಹೇಳಿದ್ದಾರೆ.
ತಾಲೂಕಿನ ಹುಲಿಕಲ್ಗೆ ಆಗಮಿಸಿದ್ದ ಅವರು 'ಕನ್ನಡಪ್ರಭ'ದೊಂದಿಗೆ ಮಾತನಾಡಿ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜಿಲ್ಲೆಯಾದ್ಯಂತ ನನ್ನದೇ ಆದ ಶಕ್ತಿಯನ್ನು ಹೊಂದಿದ್ದು, ಬೆಂಬಲಿಗರೊಂದಿಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿ ಅವರು ಅಭಿಪ್ರಾಯ ಸಂಗ್ರಹಿಸಿದ್ದೇನೆ ಎಂದರು.
ಈಗಾಗಲೇ ಕೊಡಚಾದ್ರಿ ಜನ ವೇದಿಕೆಯನ್ನು ಸ್ಥಾಪಿಸಲಾಗಿದ್ದು ಚಾಲನೆ ನೀಡಲಾಗಿದೆ. ಕೊಡಚಾದ್ರಿ ಸಮೂಹ ಸಂಸ್ಧೆಗಳಲ್ಲಿ ತೊಡಿಗಿಸಿಕೊಂಡಿರುವ ಸಾವಿರಾರು ಕಾರ್ಯಕರ್ತರು, ಸಹಕಾರಿ ಸ್ನೇಹಿತರು ನನ್ನ ಜೊತೆಗಿದ್ದಾರೆ. ಅಲ್ಲದೆ ತೀರ್ಥಹಳ್ಳಿ ವಿಧಾನಸಭೆಗೆ ಮೊದಲ ಬಾರಿಗೆ ಸ್ಪರ್ಧಿಸಿ ಅಲ್ಪಮತದಿಂದ ಸೋತಿದ್ದರೂ ಕೂಡ ಸಾವಿರಾರು ಕಾರ್ಯಕರ್ತರು ಬದಲಾದ ರಾಜಕೀಯ ಸನ್ನಿವೇಶದಲ್ಲೂ ನನ್ನೊಂದಿಗೆ ಹೆಗಲು ಕೊಟ್ಟಿದ್ದಾರೆ. ಹೀಗಾಗಿ ಅವರನ್ನು ನಡುನೀರಲ್ಲಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಹದಗೆಟ್ಟ ರಸ್ತೆ: ಹುಲಿಕಲ್ನಿಂದ ಮಾಸ್ತಿಕಟ್ಟೆ ಕಾನುಗೋಡು ರಸ್ತೆಯ ದುರಾವಸ್ಥೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರಾಗಿ ಸಚಿವರಾಗಿರುವವರು, ಇನ್ನು ಚುನಾವಣೆಯ ಸೀರೆ ಬಗ್ಗೆ ಮಾತನಾಡುತ್ತಿದ್ದಾರೆ ಹೊರತು ನಮ್ಮ ರಸ್ತೆ, ನೀರು, ಹೀಗೆ ಕನಿಷ್ಠ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದಿರುವುದು ವಿಪರ್ಯಾಸ. ಪ್ರಮುಖ ಮಾರ್ಗವಾಗಿರುವ ಈ ರಸ್ತೆಯಲ್ಲಿ ಗರ್ಭಿಣಿಯರು ಹೋದರೆ ರಸ್ತೆ ಮೇಲೆ ಹೆರಿಗೆಯಾಗುತ್ತದೆ. ಅಂತಹ ದಯನೀಯ ಪರಿಸ್ಥಿತಿ ಇಲ್ಲಿದೆ. ಸರ್ಕಾರ ಕೂಡಲೇ ರಸ್ತೆ ದುರಾವಸ್ಥೆ ಸರಿಪಡಿಸಲಿ ಎಂದು ಒತ್ತಾಯಿಸಿದರು.
ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಕರಿಮನೆ ಗ್ರಾಪಂ ಮಾಜಿ ಅಧ್ಯಕ್ಷ ದೇವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ನನ್ನ ಸಾಮರ್ಥ್ಯ ತೋರಿಸುವೆ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಏಕಾಏಕಿ ಬಿಜೆಪಿ ಸೇರಿದ ಮೇಲೆ ನಾನು ರಾಜಕೀಯದಿಂದ ತಟಸ್ಥನಾಗಿದ್ದೇನೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಬೆಂಬಲಿಸುವುದರ ಜೊತೆಗೆ ನನ್ನ ಸಾಮರ್ಥ್ಯ ಪ್ರದರ್ಶಿಸುತ್ತೇನೆ. ಈಗಾಗಲೇ ಹಲವು ಪಕ್ಷದಿಂದ ನನ್ನನ್ನು ಸಂಪರ್ಕಿಸಿದ್ದರೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಭವಿಷ್ಯದ ರಾಜಕಾರಣ ಗಮನದಲ್ಲಿಟ್ಟುಕೊಂಡು ತಕ್ಕ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

