ಶಿವಮೊಗ್ಗ

ಅಕ್ರಮ ಮದ್ಯ ಮಾರಾಟ: ಬಂಧನ

Published On :

ಶಿವಮೊಗ್ಗ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮಾರಾಟಕ್ಕೆ ಇಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪುರಲೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ರಾಜಪ್ಪ (55) ಎಂಬುವರನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, 2 ಸಾವಿರ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೊನ್ನವಿಲೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಸಂದೀಪ (32) ಎಂಬುವರನ್ನು ಬಂಧಿಸಿ 9500 ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಓತಿಘಟ್ಟದಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ಶಿವನಾಯ್ಕ (30) ಎಂಬುವರನ್ನು ಬಂಧಿಸಿ 2600 ಮೌಲ್ಯದ ಮದ್ಯ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆ ವ್ಯಾಪ್ತಿಯ ತನಿಕಲ್ಲು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಕುಮಾರ ಹಾಗೂ ಲವ ಎಂಬುವರನ್ನು ಮಾಳೂರು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ಇಲ್ಲಿಗೆ ಸಮೀಪದ ಹೊಳೆಹಟ್ಟಿ ಗ್ರಾಮದ ರಂಗನಾಥ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಪರೀಕ್ಷೆಯಲ್ಲಿ ನಪಾಸಾಗುವ ಭಯದಿಂದ ಮನೆಯಲ್ಲಿ ನೇಣು ಹಾಕಿಕೊಂಡು ಮರಣಹೊಂದಿದ್ದಾರೆಂದು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಎತ್ತು ತಿವಿದು ಸಾವು
ಎತ್ತುಗಳಿಗೆ ನೀರು ಕುಡಿಸುತ್ತಿರುವಾಗ ಎತ್ತು ಕೊಂಬಿನಿಂದ ತಿವಿದ ಪರಿಣಾಮ ನಾರಾಯಣಪುರದ ರೇಖಾನಾಯ್ಕ (30) ತೀವ್ರತರ ರಕ್ತ ಗಾಯವಾಗಿದ್ದು, ಚಿಕಿತ್ಸೆಗೆ ಮೆಗ್ಗಾನ್ ಅಸ್ವತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಮರಣ ಹೊಂದಿರುತ್ತಾರೆ ಎಂದು ಕುಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ನದಿಗೆ ಬಿದ್ದು ಸಾವು
ಶಿಕಾರಿಪುರ ತಾಲೂಕು ಹಿತ್ತಲ ಗ್ರಾಮದಲ್ಲಿ ಕುಮದ್ವತಿ ಹೊಳೆಗೆ ಬಿದ್ದು ಮಾಯಮ್ಮ (28) ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜು: ಐವರ ಸೆರೆ
ಶಿವಮೊಗ್ಗದ ಲಕ್ಷ್ಮಿ ಚಿತ್ರಮಂದಿರದ ಹಿಂಭಾಗ ಇಸ್ಪೀಟ್ ಆಡುತ್ತಿದ್ದ ರವಿ ಮತ್ತು ಐವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂಜಿಗೆ ಬಳಸಿದ್ದ 10,260 ಹಾಗೂ ಮೂರು ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಳಿ ಜೂಜು
ತೀರ್ಥಹಳ್ಳಿ ತಾಲೂಕು ಮಂಡವಳ್ಳಿಯಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿ ಜೂಜಾಡುತ್ತಿದ್ದ ಐವರನ್ನು ಆಗುಂಬೆ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಕುಮಾರ, ಇತರೆ ನಾಲ್ವರು ಬಂಧಿತರಾಗಿದ್ದು, ಬಂಧಿತರಿಂದ 2 ಕೋಳಿ ಹಾಗೂ 4760 ವಶಕ್ಕೆ ಪಡೆದುಕೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.