ಶಿವಮೊಗ್ಗ

ತಬಲಿ ಬಂಗಾರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ

Published On :


ಸಾಗರ: ವಿಧಾನಸಭಾಧ್ಯಕ್ಷರಾಗಿರುವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿರುವ ಡಿಸಿಸಿ ಸದಸ್ಯ ಹಾಗೂ ಸೊರಬ ತಾಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ತಬಲಿ ಬಂಗಾರಪ್ಪ ಅವರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ತಾ. ಬಗರ್‌ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಮಾರ್ ಬಂಗಾರಪ್ಪ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಲು ಕಾಗೋಡು ತಿಮ್ಮಪ್ಪ ಅವರೆ ಕಾರಣ ಎಂದು ತಬಲಿ ಬಂಗಾರಪ್ಪ ಮಾಡಿರುವ ಆರೋಪವನ್ನು ಸಾಗರ ಕಾಂಗ್ರೆಸ್ ಘಟಕವು ತೀವ್ರವಾಗಿ ಖಂಡಿಸುತ್ತದೆ.
 ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಅವರು ತಬಲಿ ಬಂಗಾರಪ್ಪ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರಿಂದ ಪಕ್ಷ ನೀಡಿರುವ ಎಲ್ಲಾ ಸ್ಥಾನಗಳಿಗೂ ರಾಜಿನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಹೊಳೆಯಪ್ಪ ಮಾತನಾಡಿ, ಕಾಗೋಡು ತಿಮ್ಮಪ್ಪ ಅವರು ಮನಸ್ಸು ಮಾಡಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ, ಯಾವುದೆ ಲಾಬಿ ಮಾಡದೆ, ಹಿಂದಿನಿಂದಲೂ ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ಮುತುವರ್ಜಿಯಿಂದ ಕಾಗೋಡು ತಿಮ್ಮಪ್ಪನವರು ನಿಭಾಯಿಸಿಕೊಂಡು ಬಂದಿದ್ದಾರೆ.
ವಿಧಾನಸಭಾಧ್ಯಕ್ಷರಾದ ಮೇಲೆ ಕಾಗೋಡು ತಿಮ್ಮಪ್ಪನವರು ಸ್ವೀಕರ್ ಹುದ್ದೆಯ ಘನತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಸಹ ಪಾಲ್ಗೊಳ್ಳುತ್ತಿಲ್ಲ.
  ಅಂಥವರ ವಿರುದ್ಧ ತಬಲಿ ಬಂಗಾರಪ್ಪ ಮಾಡಿರುವ ಆರೋಪ ಅತ್ಯಂತ ಖಂಡನೀಯ ಎಂದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಕ್ರೆ, ಹೈಕಮಾಂಡ್‌ಅನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಹಾಗೂ ಖಾಸಗಿ ಮಾಹಿತಿ ಆಧರಿಸಿ ಕಾಂಗ್ರೆಸ್ ಹೈಕಮಾಂಡ್ ಕ್ಷೇತ್ರವನ್ನು ಗೆಲ್ಲುವ ಉದ್ದೇಶದಿಂದ ಮಂಜುನಾಥ ಭಂಡಾರಿ ಅವರಿಗೆ ಟಿಕೆಟ್ ನೀಡಲಾಗಿದೆ.
 ಹೊಸ ಮುಖಕ್ಕೆ ಟಿಕೆಟ್ ಕೊಟ್ಟರೆ ಅನುಕೂಲ ಎನ್ನುವುದು ಹೈಕಮಾಂಡ್ ಚಿಂತನೆಯಾಗಿದೆ. ಅಲ್ಲದೆ, ಈಗಾಗಲೆ ಜೆಡಿಎಸ್‌ನಿಂದ ಬಂಗಾರಪ್ಪ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ.
 ಈ ಸಂದರ್ಭದಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡಿದರೆ ಪಕ್ಷ ಗೆಲ್ಲುವುದು ಕಷ್ಟ ಎನ್ನುವ ಉದ್ದೇಶದಿಂದ ಪಕ್ಷವು ಮಂಜುನಾಥ ಭಂಡಾರಿಯವರಿಗೆ ಟಿಕೆಟ್ ನೀಡಿದೆ ಎಂದರು.
ನಗರಸಭೆ ಅಧ್ಯಕ್ಷೆ ಎನ್. ಲಲಿತಮ್ಮ, ಪ್ರಮುಖರಾದ ರಮೇಶ್ ಗಾಳಿಪುರ, ಹಮೀದ್, ಜಿ.ಕೆ.ಭೈರಪ್ಪ, ಮೈಕೆಲ್ ಡಿಸೋಜ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.