ಶಿವಮೊಗ್ಗ

ಸಾಗರ ತಾಲೂಕಿನ ವಿವಿಧೆಡೆ ಕಾಡ್ಗಿಚ್ಚು

Published On :

ತ್ಯಾಗರ್ತಿ: ಸಾಗರ ತಾಲೂಕಿನ ತ್ಯಾಗರ್ತಿ, ಗೌತಮಪುರ ಜಂಬೂರುಮನೆ, ಉಳ್ಳೂರು, ಕಾಸ್ಪಾಡಿ, ಜಿಗಳೆಮನೆ ಅರಣ್ಯ ಪ್ರದೇಶದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಹಬ್ಬುತ್ತಿದ್ದು, ಇಲಾಖೆ ಸಿಬ್ಬಂದಿ ಕಾಡ್ಗಿಚ್ಚನ್ನು ಆರಿಸಲು ಹರಸಾಹಸ ಪಡುತ್ತಿದ್ದಾರೆ.
ಈ ಭಾಗದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಜಮೀನು, ಬಗರ್‌ಹುಕುಂ ಜಮೀನುಗಳಲ್ಲಿ ರೈತರು ಸಾಗುವಳಿ ಮಾಡಲು, ಜೋಳ ಬೆಳೆದ ಜಾಗದಲ್ಲಿ ಜಮೀನು ಸ್ವಚ್ಛಗೊಳಿಸಲು ಬೆಂಕಿ ಹಾಕುತ್ತಿದ್ದಾರೆ. ಈ ಬೆಂಕಿ ಕೆನ್ನಾಲಿಗೆಗೆ ಕಾಡುಗಳು, ವನ್ಯಜೀವಿಗಳು ಬಲಿಯಾಗುತ್ತಿವೆ ಎಂದು ಅರಣ್ಯ ಸಿಬ್ಬಂದಿ ತಿಳಿಸುತ್ತಾರೆ.
ಅರಣ್ಯ ಪ್ರದೇಶಗಳಿಗೆ ಬೆಂಕಿ ಹರಡದಂತೆ ಫೈರ್ ಲೈನುಗಳನ್ನು ಮಾಡಿದ್ದು, ಫೈರ್ ವಾಚರ್‌ಗಳನ್ನು ನೇಮಿಸಲಾಗಿದೆ. ಅರಣ್ಯ ಪ್ರದೇಶದ ಉಳುವಿಗೆ ಶ್ರಮಿಸುತ್ತಿದ್ದೇವೆ ಅಲ್ಲದೇ ಅತಿಕ್ರಮಣಗಳನ್ನು ತಡೆಗಟ್ಟಲು ಕಾಲುವೆಗಳನ್ನು ನಿರ್ಮಿಸಲಾಗಿದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.