ಕಾರ್ಯಕರ್ತರು ಒಟ್ಟಾಗಿ ಕೆಲಸ ನಿರ್ವಹಿಸಲಿ: ಈಶ್ವರಪ್ಪ
ಶಿವಮೊಗ್ಗ: ಇಲ್ಲಿನ ದೈವಜ್ಞ ಕಲ್ಯಾಣ ಮಂದಿರದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ ಸಂಜೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ಮಟ್ಟದ ಪ್ರಮುಖರ ಸಭೆ ಬಿಜೆಪಿಹಮ್ಮಿಕೊಂಡಿತ್ತು.
ಕ್ಷೇತ್ರ ವ್ಯಾಪ್ತಿಯ 266 ಬೂತ್ಗಳಿಂದ ಬೂತ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪ್ರಭಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ದೇಶದ ಹಿತದೃಷ್ಟಿಯಿಂದ ಈ ಚುನಾವಣೆ ಮಹತ್ವದ್ದಾಗಿದೆ.
ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಮನೆ ಮನೆ ಸಂಪರ್ಕ, ನಂತರ ಭಾರತ ಮಾತೆ ಪೂಜನಾ ಕಾರ್ಯಕ್ರಮ ಆಯೋಜನೆ, ಅಲ್ಲಿ ಸಾರ್ವಜನಿಕರ ಸೇರಿಸುವಿಕೆ, ಸಭೆಯಲ್ಲಿ ಚುನಾವಣೆಯ ಮಹತ್ವ ಮತ್ತು ಭಾರತ ಎದುರಿಸುತ್ತಿರುವ ಆತಂಕ ಸವಾಲುಗಳ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನವಾಗಬೇಕು ಎಂದರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ದೇಶದ ಚುಕ್ಕಾಣಿ ಹಿಡಿಯಲು ಒಬ್ಬ ಸಮರ್ಥ ನಾಯಕ ಸಿಕ್ಕಿದ್ದಾನೆ.
ಅವರನ್ನು ಪ್ರಧಾನಿ ಮಂತ್ರಿ ಹುದ್ದೆಗೆ ಕೂರಿಸುವ ಜವಾಬ್ದಾರಿ ಪ್ರತಿ ಕಾರ್ಯಕರ್ತನ ಮೇಲಿದೆ ಎಂದರು. ಡಾ. ರಾಜಕುಮಾರ್ ಅವರು ನಾಡು ಕಂಡಂತಹ ಅಪರೂಪದ ಗೌರವಯುತ ನಟ. ಅವರು ಎಂದೂ ರಾಜಕಾರಣದಲ್ಲಿ ಪ್ರವೇಶ ಪಡೆಯಲು ಇಷ್ಟಪಡಲೇ ಇಲ್ಲ.
ತುರ್ತು ಪರಿಸ್ಥಿತಿಯ ನಂತರ ಸೇರಿದಂತೆ ಅನೇಕ ಸಂದರ್ಭದಲ್ಲಿ ರಾಜಕೀಯ ಪ್ರವೇಶಕ್ಕೆ ಆಹ್ವಾನ ಬಂದರೂ ಗೌರವಯುತವಾಗಿ ತಿರಸ್ಕರಿಸಿದ್ದರು ಎಂದ ಅವರು, ದೇವೇಗೌಡರಿಗೆ ಎಲ್ಲಾ ರೀತಿಯ ರಾಜಕಾರಣವೂ ಗೊತ್ತಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಮುಖಂಡರಾದ ನಟರಾಜ್, ಚನ್ನಬಸಪ್ಪ, ಎಂ.ಶಂಕರ್ ಮತ್ತಿತರರು ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

