ಕಂದ್ಲಕೊಪ್ಪ-ತುಮಕೋಡು ರಸ್ತೆ ಕಳಪೆ ಕಾಮಗಾರಿ
ಹೊಸನಗರ: ಕಳಪೆ ನಿರ್ವಹಣೆ ಮತ್ತು ಕಳಪೆ ಗುಣಮಟ್ಟದ ಸಾಮಗ್ರಿಗಳ ಬಳಕೆ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಎಇಇ ಮಂಜುನಾಥ ದೇಸಾಯಿ ಸೂಚಿಸಿದ ಘಟನೆ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.
ಕರಿಮನೆ ಗ್ರಾಪಂ ವ್ಯಾಪ್ತಿಯ ಕಂದ್ಲಕೊಪ್ಪ- ತುಮಕೋಡು ರಸ್ತೆ ಅಭಿವೃದ್ಧಿಗೆ ಜಿ.ಪಂ.ನ 13ನೇ ಹಣಕಾಸು ಯೋಜನೆಯ ಅನುದಾನ 4 ಲಕ್ಷ ವೆಚ್ಚದಲ್ಲಿ 307 ಮೀ. ರಸ್ತೆಯ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ದಿಢೀರನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿ.ಪಂ. ಎಇಇ ಮಂಜುನಾಥ ದೇಸಾಯಿ ಕಾಮಗಾರಿ ಪರಿಶೀಲಿಸಿದ್ದಾರೆ. ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಕೆಲಸ ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.
ಅಗತ್ಯ ಕ್ರಮ: ಸದರಿ ರಸ್ತೆ ಕಾಮಗಾರಿ ಗುತ್ತಿಗೆ ಕೃಷ್ಣಮೂರ್ತಿ ಹೆಸರಿನಲ್ಲಿದ್ದು ಕಾಮಗಾರಿಯನ್ನು ಎನ್.ವೈ. ಸುರೇಶ್ ನಿರ್ವಹಿಸುತ್ತಿದ್ದಾರೆ. ಸದರಿ ರಸ್ತೆ ಕಾಮಗಾರಿ ಪರಿಶೀಲಿಸಿದಾಗ ರಸ್ತೆಯ ದಪ್ಪ ಮತ್ತು ತೂಕದಲ್ಲಿ ವ್ಯತ್ಯಾಸ, ಮತ್ತು ಡಾಂಬರೀಕರಣ ಧೂಳಿನಿಂದ ತುಂಬಿಕೊಂಡಿದೆ. ಕಾಮಗಾರಿಯನ್ನು ಉತ್ತಮವಾಗಿ ನಿರ್ವವಹಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದು ಎಇಇ ಮಂಜುನಾಥ ದೇಸಾಯಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

