ಶಿವಮೊಗ್ಗ

ದುಂಡಾಣು ರೋಗಬಾಧೆ ನಿಯಂತ್ರಣಕ್ಕೆ ಸಲಹೆ

Published On :

ಭದ್ರಾವತಿ: ತಾಲೂಕಿನಲ್ಲಿ ಬೇಸಿಗೆ ಹಂಗಾಮಿನ ಬತ್ತದೆ ಬೆಳೆಯು ನಾಟಿಯಾಗಿ ಸುಮಾರು 20 ರಿಂದ 50 ದಿನದ ಬೆಳೆಯಿದೆ. ಕೆಲವು ಗ್ರಾಮಗಳಲ್ಲಿ ಅಲ್ಲಲ್ಲಿ ಬತ್ತದ ಬೆಳೆಗೆ ದುಂಡಾಣು ರೋಗದ ಬಾಧೆ ಕಂಡುಬಂದಿದೆ. ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿ ಭದ್ರಾವತಿಯ ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ. ತೆನೆಯ ಅಂಚಿನ ಗರಿಗಳು ಒಣಗಿದಂತಾಗಿ ತಿಳಿ ಹಸಿರು ಬಣ್ಣಕ್ಕೆ ತಿರುಗಿ ನಂತರ ಒಣಗಿದಂತಾಗಿ ತುದಿ ಹೆಡೆಯಂತೆ ಬಾಗಿರುವುದು ಈ ರೋಗದ ಲಕ್ಷಣ. ಎಲೆಯ ಅಂಚಿನಲ್ಲಿ ಉದ್ದನೆಯ ಒಣಗಿದ ಪಟ್ಟಿಗಳು ಕಂಡುಬರುತ್ತವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ಗದ್ದೆಗಳಲ್ಲಿನ ನೀರು ಬಸಿದು ಸಾರಜನಕ ರಸಗೊಬ್ಬರದ ಬಳಕೆ ಕಡಮೆ ಮಾಡಬೇಕು ಮತ್ತು ಸ್ಟ್ರೆಪ್ಟೋಮೈಸಿನ್ ಸಲ್ಫೇಟ್ 0.4 ಹಾಗೂ ಕಾಪಲ್ ಆಕ್ಸಿಕ್ಲೊರೈಡ್-1 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಚೆನ್ನಾಗಿ ಸಿಂಪಡಣೆ ಮಾಡಬೇಕು. ಎಕರೆಗೆ ಕನಿಷ್ಠ 200 ರಿಂದ 250 ಲೀಟರ್ ದ್ರಾವಣ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.