ಶಿವಮೊಗ್ಗ

ಈಜಲು ಹೋಗಿದ್ದ ಯುವಕ ಸಾವು

Published On :

ಭದ್ರಾವತಿ: ಕಣಕಟ್ಟೆ ವಾಸಿ ಶಿವರಾಜ (23) ಎಂಬವರು ಭದ್ರಾ ಬಲದಂಡೆ ನಾಲೆಯಲ್ಲಿ ಬುಧವಾರ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಈತನ ಮೃತದೇಹ ಉಕ್ಕುಂದ ಗ್ರಾಮದ ಬಳಿ ನಾಲೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಭದ್ರಾವತಿ ಗ್ರಾಮಾಂತರ ಪೊಲೀಸರು ಆಕಸ್ಮಿಕ ಮರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂಜಾಟ:  ಪಟ್ಟಣದ ಜನ್ನಾಪುರದ ರಾಜಪ್ಪ ಲೇಔಟ್‌ನ ಲಕ್ಷ್ಮಿ ನಿಲಯದ ಮೇಲೆ ಅಂದರ್ ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ನ್ಯೂಟೌನ್ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸಂದೀಪ್ ಮತ್ತವರ ಸಿಬ್ಬಂದಿ ದಾಳಿ ನಡೆಸಿ ಹಲವರನ್ನು ಬಂಧಿಸಿದರು. ಬಂಧಿತರಿಂದ 15250 ನಗದು, 9 ಮೊಬೈಲ್ ಫೋನ್, ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೈಕ್ ಕಳವು: ದೂರು:  ನ್ಯೂಟೌನ್ ಸರ್ಕಾರಿ ಪಾಲಿಟೆಕ್ನಿಕ್ ಬಳಿ ನಿಲ್ಲಿಸಿದ್ದ ಕೆಎ.14. ಆರ್.4290 ನೋಂದಣಿ ಸಂಖ್ಯೆಯ ಸ್ಪೆಂಡರ್ ಬೈಕ್  ಬುಧವಾರ ಕಳವಾಗಿರುವ ಬಗ್ಗೆ ಮಾಲೀಕ ಕೃಷ್ಣಮೂರ್ತಿ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.