ಕಟ್ಟುಪಾಡು, ಸಂಪ್ರದಾಯ ಮರೆಯುತ್ತಿರುವುದು ಆತಂಕಕಾರಿ
ಕ.ಪ್ರ.ವಾರ್ತೆ ಶಿವಮೊಗ್ಗ ಮಾ. 21
ಪ್ರಕೃತಿ ದೇವರು ಎಂಬುದನ್ನು ಮರೆತು ಮೃಗಗಳಂತೆ ವರ್ತಿಸುತ್ತಿರುವುದು, ಹಿಂದಿನ ಸಂಪ್ರದಾಯ, ಸಂಸ್ಕೃತಿ, ಕಟ್ಟುಪಾಡು ಮರೆಯುತ್ತಿರುವುದು ಆತಂಕಕಾರಿ ಸಂಗತಿ ಎಂದು ಕುವೆಂಪು ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ. ಆರ್. ಹಿರೇಮಣಿ ನಾಯ್ಕ ವಿಷಾದ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡ್ನ ಜಲಪ್ರಳಯದ ರೋಚಕ ಅನುಭವಗಳು ಮತ್ತು ವಿಪತ್ತು ನಿರ್ವಹಣೆಯಲ್ಲಿ ಯುವಜನತೆಯ ಪಾತ್ರ ಕುರಿತು ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಕೃತಿಯ ಮೇಲಿನ ನಿರಂತರ ದಾಳಿಯಿಂದ ಹವಾಮಾನ ವೈಪರೀತ್ಯ ಉಂಟಾಗಿ ಮನುಕುಲ ಸೇರಿದಂತೆ ಪ್ರಾಕೃತಿಕ ಸಂಪನ್ಮೂಲಗಳೂ ನಾಶವಾಗುತ್ತಿದೆ ಎಂದ ಅವರು, ಹವಾಮಾನ ವೈಪರೀತ್ಯದಿಂದ ಉಂಟಾದ ವಿಪತ್ತಿನ ಸಂದರ್ಭದಲ್ಲಿ ಕೇವಲ ಮಾತಿನ ಸಹಾಯದಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಬದಲಾಗಿ ಯುವ ಜನತೆ ಸ್ವಯಂ ಸೇವಕರಂತೆ ಕಾರ್ಯನಿರ್ವಹಿಸಬೇಕು ಎಂದರು.
ಗೃಹ ರಕ್ಷಕ ದಳದ ಕಮಾಂಡೆಂಟ್ ಹಾಲಪ್ಪ, ಡಾ. ಕುಮಾರ್, ಎಚ್. ಜಯದೇವಪ್ಪ ಇದ್ದರು. ಪ್ರಹ್ಲಾದಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹನಾ ಪ್ರಾರ್ಥಿಸಿದರು.
ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ
ಸಾಗರ: ಇಲ್ಲಿನ ಆರ್ಟಿಒ ಕಚೇರಿ ಪಕ್ಕದಲ್ಲಿರುವ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ ವಿಜಯಕುಮಾರ್ ಎಂಬ ವ್ಯಕ್ತಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಮಾಡಿ ಬದುಕಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬಾವಿಕಟ್ಟೆ ಮೇಲೆ ಕುಳಿತಿದ್ದ ವಿಜಯಕುಮಾರ್ ಆಯತಪ್ಪಿ 60 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿ ಮೇಲೆತ್ತಿ, ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿಸಿದ್ದು, ಈಗ ವಿಜಯಕುಮಾರ್ ಚೇತರಿಸಿಕೊಳ್ಳುತ್ತಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಹಾಯಕ ಅಧಿಕಾರಿ ಜೆ. ಚಂದ್ರಶೇಖರಪ್ಪ, ಸಿಬ್ಬಂದಿಗಳಾದ ಅಬ್ದುಲ್ ರಜಾಕ್, ಕೆ. ಈಶ್ವರನಾಯ್ಕ್, ಎನ್. ಸುರೇಶ್, ರವಿರಾಜ್ ಹಾಗೂ ಎಸ್.ಕೆ. ಸತೀಶ್ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

