ಸಾಂಕ್ರಾಮಿಕ ರೋಗ ಹತೋಟಿಗೆ ಸಹಕರಿಸಿ
ತಾಪಂನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಗೋಪಾಲ್
ಕ.ಪ್ರ.ವಾರ್ತೆ ಶಿಕಾರಿಪುರ ಮಾ.24
ಸಮಾಜದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗದ ಬಾಧೆ ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ರೋಗದ ಸಂಪೂರ್ಣ ಹತೋಟಿ ಕೇವಲ ಇಲಾಖೆಯ ಕರ್ತವ್ಯ ಎಂದು ಭಾವಿಸದೆ ಸ್ಥಳೀಯ ಸಂಘ ಸಂಸ್ಥೆಗಳು ಸಾರ್ವಜನಿಕರು ಪೂರಕವಾಗಿ ಸಹಕರಿಸುವಂತೆ ಜಿ.ಪಂ. ಉಪಕಾರ್ಯನಿರ್ವಹಣಾಧಿಕಾರಿ ಗೋಪಾಲ್ ತಿಳಿಸಿದರು.
ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಮಾಹಿತಿ ಕಾರ್ಯಾಗಾರ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ಸಮಾಜದಲ್ಲಿ ನಿತ್ಯ ಕಾಣಿಸಿಕೊಳ್ಳುವ ಮೂಲಕ ಭೀತಿ ಹುಟ್ಟಿಸುತ್ತಿದೆ. ಇವುಗಳ ನಿಯಂತ್ರಣ ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಪಂಚಾಯತ್ರಾಜ್ ಹಾಗೂ ಆರೋಗ್ಯ ಇಲಾಖೆಯ ಜತೆಗೆ ಸಮುದಾಯ ಪೂರಕವಾಗಿ ಸಹಕರಿಸಬೇಕಾಗಿದೆ ಎಂದರು.
ಕಾಳಜಿ ವಹಿಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಮಾತನಾಡಿ, ಪೋಲಿಯೋ ಮುಕ್ತ ದೇಶದ ನಿರ್ಮಾಣಕ್ಕಾಗಿ ಇಲಾಖೆಯ ಸಿಬ್ಬಂದಿಯ ಸತತ ಪರಿಶ್ರಮದಿಂದ ಸಾಧ್ಯವಾಗಿದೆ. ಇದೇ ಮಾದರಿಯಲ್ಲಿ ಇಲಾಖೆಯ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಪರಿಗಣಿಸಿ ಹೆಚ್ಚಿನ ಕಾಳಜಿಯನ್ನು ವಹಿಸಿದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆಯ ರೀತಿಯಲ್ಲಿ ಸಾಧನೆಯನ್ನು ಕೈಗೊಳ್ಳಲು ಸಾಧ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಂಘದ ಗೌರವಾಧ್ಯಕ್ಷ ಡಾ.ನಾಗರಾಜನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳೆಯರಿಗಾಗಿ ರಂಗೋಲಿ, ಪ್ರಬಂಧ, ಆಶುಭಾಷಣ ಮತ್ತು ಜಾನಪದ ಗೀತೆಗಳ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಲಾಖೆಗೆ ಹೊಸದಾಗಿ ಸೇರ್ಪಡೆಗೊಂಡವರನ್ನು ಸ್ವಾಗತಿಸಿ, ವರ್ಗಾವಣೆಗೊಂಡವರನ್ನು ಬೀಳ್ಕೊಟ್ಟು, ನಿವೃತ್ತರಿಗೆ ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ.ಹರ್ಷವರ್ಧನ್ ವಹಿಸಿದ್ದರು. ತಾ.ಪಂ. ಇಒ ಡಾ.ಚಂದ್ರಶೇಖರ್, ಡಾ.ಗಂಗೀಬಾಯಿ, ಕೇಶವ್, ಸಿಡಿಪಿಒ ಲಿಂಗಾನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಗಾಯತ್ರಿ ಪ್ರಾರ್ಥಿಸಿ, ತಿಪ್ಪೇಶ್ ಸ್ವಾಗತಿಸಿ, ಸುರೇಶ್ ನಿರೂಪಿಸಿ, ರಮೇಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

