ಅಡಕೆ ನಿಷೇಧ ಪ್ರಮಾಣಪತ್ರ ಸಲ್ಲಿಕೆ ಬಗ್ಗೆ ಬಿಎಸ್ವೈ ಅಪಪ್ರಚಾರ
ಶಿವಮೊಗ್ಗ: ಅಡಕೆ ನಿಷೇಧದ ಬಗ್ಗೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಮಾಣಪತ್ರ ಸಲ್ಲಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ. ನಿಜವೇ ಆಗಿದ್ದರೆ ಅವರು ಪ್ರಮಾಣ ಪತ್ರವನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಸವಾಲೆಸೆದಿದ್ದಾರೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಸೋಲಿನ ಭೀತಿಯಿಂದ ಅಪಪ್ರಚಾರ ಮಾಡುತ್ತಿದ್ದಾರೆ. ಅವರು ಹತಾಶರಾಗಿದ್ದಾರೆ. ಪ್ರಮಾಣ ಪತ್ರವನ್ನು ಹಾಜರು ಮಾಡಲು ಸಾಧ್ಯವಾಗದಿದ್ದರೆ ಅವರು ಚುನಾವಣಾ ಕಣದಿಂದ ನಿವೃತ್ತರಾಗಲಿ ಎಂದಿದ್ದಾರೆ.
ಅಡಕೆ ಬೆಳೆಗಾರರಿಗೆ ಬಿಜೆಪಿಯೇ ಮಾರಕವಾಗಿದೆ. ನೂರಾರು ಕೋಟಿ ರು. ವಹಿವಾಟು ನಡೆಸುವ ಶಿವಮೊಗ್ಗ ಎಪಿಎಂಸಿ ಇರುವ ಪ್ರದೇಶವನ್ನು ಹಿಂದಿನ ಬಿಜೆಪಿ ಸರ್ಕಾರವು ಅರಣ್ಯ ಪ್ರದೇಶ ಎಂದು ಇಂಡೀಕರಣ ಮಾಡಲು ಹೊರಟಿತ್ತು ಎಂದು ಟೀಕಿಸಿದರು.
ಕಾಂಗ್ರೆಸ್ ಕ್ರಮ: 5 ವರ್ಷ ಸಂಸದರಾಗಿದ್ದ ಬಿ.ವೈ. ರಾಘವೇಂದ್ರ ಅವರು ಒಂದು ಬಾರಿಯೂ ಸಂಸತ್ತಿನಲ್ಲಿ ಅಡಕೆ ಬಗ್ಗೆ ಮಾತನಾಡಿಲ್ಲ. ಚರ್ಚಿಸಿಲ್ಲ. ಇದರಿಂದಾಗಿ ಜನರು ಆಕ್ರೋಶಗೊಂಡಿದ್ದಾರೆ. ಆದರೆ, ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಅವರು ಅಡಕೆ ಬಗ್ಗೆ ಮಾತನಾಡುತ್ತಾರೆ. ಇವರು ಸಂಸತ್ ಸದಸ್ಯರೋ, ಜಿಲ್ಲಾ ಪಂಚಾಯ್ತಿ ಸದಸ್ಯರೋ ಎಂದು ಲೇವಡಿ ಮಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಅಡಕೆ ಬೆಳೆಗಾರರ ಹಿತ ಕಾಯಲು ಹಲವು ಕ್ರಮ ಕೈಗೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಎಸ್.ಪಿ. ದಿನೇಶ್, ತೀ.ನಾ. ಶ್ರೀನಿವಾಸ್, ರವಿಕುಮಾರ್, ರಾಮೇಗೌಡ, ಕೆ.ದೇವೇಂದ್ರಪ್ಪ, ಸೈಯದ್ ವಾಹಿದ್ ಅಡ್ಡು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

