ಶಿವಮೊಗ್ಗ

'ಟಿಕೆಟ್ ತಪ್ಪಿಸಿದ ತಿಮ್ಮಪ್ಪ'

Published On :

ಸಾಗರ: ಶಿವಮೊಗ್ಗ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಬದಲು ಮಂಜುನಾಥ್ ಭಂಡಾರಿಗೆ ಟಿಕೆಟ್ ದೊರೆಯುವಂತೆ ಮಾಡಿದ್ದು ಕಾಗೋಡು ತಿಮ್ಮಪ್ಪ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದ್ದಾರೆ.
ಈಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಿನ್ನೆಲೆ ಪಕ್ಷದ ಕಾರ್ಯಾಲಯಕ್ಕೆ ಗುರುವಾರ ಆಗಮಿಸಿದಾಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ, ಅಭಿಮಾನಿಗಳ ಸಭೆ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷವು ಶಿವಮೊಗ್ಗ ಲೋಕಸಭೆಯಲ್ಲಿ ಪ್ರಬಲ ಸ್ಪರ್ಧೆ ನೀಡುವ ಉದ್ದೇಶ ಹೊಂದಿದ್ದರೆ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಕೊಡುತಿತ್ತು. ಆದರೆ ಕಾಗೋಡು ತಿಮ್ಮಪ್ಪ ಎಲ್ಲಿ ಕುಮಾರ್ ಬಂಗಾರಪ್ಪ ತಮಗಿಂತ ಎತ್ತರಕ್ಕೆ ಬೆಳೆಯುತ್ತಾರೋ ಎಂದು ಅವರಿಗೆ ಪಕ್ಷದಿಂದ ಟಿಕೆಟ್ ಕೊಡಿಸಲು ಆಸಕ್ತಿ ವಹಿಸಿಲ್ಲ ಎಂದರು.
ತಾವು ಚಳವಳಿಯ ಹಿನ್ನೆಲೆಯಿಂದ ಬಂದವರು ಎಂದು ಭಾಷಣ ಮಾಡುವ ಕಾಗೋಡು ತಿಮ್ಮಪ್ಪ, ಕ್ಷೇತ್ರದಲ್ಲಿ ಮಾತ್ರ ಜನರು ಹತ್ತಿರ ಸುಳಿಯಲು ಬಿಡುತ್ತಿಲ್ಲ. ಕಾಗೋಡು ತಿಮ್ಮಪ್ಪ ಅವರ ಕಟ್ಟಾ ಬೆಂಬಲಿಗರು ಸಹ ಕಾಂಗ್ರೆಸ್ ತೊರೆಯುವ ಉತ್ಸುಕತೆ ತೋರುತ್ತಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಬಿ.ಆರ್. ಜಯಂತ್, ಗೋಪಾಲಕೃಷ್ಣ ಬೇಳೂರು ಬಿಜೆಪಿ ಸೇರ್ಪಡೆಯಿಂದಾಗಿ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಬಂದಿದೆ. ಸಾಗರ ಕ್ಷೇತ್ರ ಮಾತ್ರವಲ್ಲದೆ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಸಹ ಬಿಜೆಪಿ ಶಕ್ತಿ ವೃದ್ಧಿಸಲಿದೆ ಎಂದರು.
ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಚೇತನರಾಜ್ ಕಣ್ಣೂರು, ನಗರ ಘಟಕದ ಅಧ್ಯಕ್ಷ ಸತೀಶಬಾಬು, ಜಿಲ್ಲಾ ಉಪಾಧ್ಯಕ್ಷ ಯು.ಎಚ್. ರಾಮಪ್ಪ, ನಗರಸಭೆ ಮಾಜಿ ಅಧ್ಯಕ್ಷರಾದ ಟಿ.ಡಿ. ಮೇಘರಾಜ್, ಎಸ್.ವಿ. ಕೃಷ್ಣಮೂರ್ತಿ, ಸಂತೋಷ್ ಶೇಟ್, ರಾಜು ಬಿ. ಮಡಿವಾಳ್, ಸುನೀಲ್ ರೊನಾಲ್ಡೋ, ಎಲ್.ವಿ. ಅಕ್ಷರ, ಶ್ರೀನಿವಾಸ್ ಮೇಸ್ತ್ರಿ, ನಾಗರಾಜ ಸುಬ್ರು ಇನ್ನಿತರರು ಹಾಜರಿದ್ದರು.

'ಬಂಗಾರಪ್ಪ ನನ್ನ
ರಾಜಕೀಯ ಗುರು'
ನಾನು ಹಿಂದಿನ ಕಹಿ ಘಟನೆ ಮರೆತು, ಮೋದಿಯವರನ್ನು ಪ್ರಧಾನಿ ಮಾಡಲು ಬಿಜೆಪಿ ಸೇರಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ. ಅವರಿಗೆ ಹೆಚ್ಚಿನ ಮತ ಕೊಡಿಸುವುದು ನನ್ನ ಮುಖ್ಯ ಕರ್ತವ್ಯವಾಗಿದೆ. ದಿ. ಎಸ್.ಬಂಗಾರಪ್ಪ ಅವರು ನನ್ನ ರಾಜಕೀಯ ಗುರುಗಳು. ಆದರೆ, ಅವರ ಮಕ್ಕಳು ನನ್ನ ಗುರುಗಳಾಗಲು ಸಾಧ್ಯವಿಲ್ಲ. ಪಕ್ಷದ ಗೆಲವಿಗೆ ನಾವೆಲ್ಲ ಒಟ್ಟಾಗಿ ಶ್ರಮಿಸುತ್ತೇವೆ ಎಂದು ಗೋಪಾಲಕೃಷ್ಣ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.