ವಿದ್ಯುತ್ ಸ್ಟೇಷನ್ಗೆ ರೈತರ ಮುತ್ತಿಗೆ
ಶಿರಾಳಕೊಪ್ಪ: ಕಳೆದವಾರ ರೈತರಿಗೆ ಮಾತುಕೊಟ್ಟಂತೆ ವಿದ್ಯುತ್ ಕೊಡುತ್ತಿಲ್ಲ ವೆಂದು ಆಕ್ರೋಶಗೊಂಡ ನೂರಾರು ರೈತರು ಶಿರಾಳಕೊಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳಿಗೆ ವಿದ್ಯುತ್ ಸರಬರಾಜು ಮಾಡುವ ಬಳ್ಳಿಗಾವಿ 220ಕೆವಿ ಸ್ಟೇಷನ್ಗೆ ಮುತ್ತಿಗೆ ಹಾಕಿ ವಿದ್ಯುತ್ ನಿಲುಗಡೆ ಮಾಡಿಸಿದರು.
ಈ ಹಿಂದೆ ಸರ್ಕಾರ ಈ ಭಾಗದ ರೈತರಿಗೆ ವಿದ್ಯುತ್ ಸರಿಯಾಗಿ ಸರಬರಾಜು ಆಗಲಿ ಎಂದು 50 ಕೋಟಿ ವೆಚ್ಚದಲ್ಲಿ ಈ ಸ್ಟೇಷನ್ ನಿರ್ಮಿಸಿದ್ದಾರೆ. ಆದರೆ ಈಗ ಪ್ರತಿದಿನ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಎಲ್ಲೆಡೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವವರೆಗೆ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲು ಅವಕಾಶ ನೀಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು.
ಬೆಳಗ್ಗೆ 10ಗಂಟೆಯಿಂದ ಸಂಜೆ ವರೆಗೆ ವಿದ್ಯುತ್ ನಿಲುಗಡೆ ಮಾಡಿಸಿದ ರೈತರು ಸಂಜೆ ಮೆಸ್ಕಾಂ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನೀಯರ್ ಮತ್ತು ಇತರರು ಸ್ಥಳಕ್ಕೆ ಬಂದು ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಮಾತನಾಡಿ ಹೆಚ್ಚುವರಿ ವಿದ್ಯುತ್ ಪಡೆದು ಸರಬರಾಜು ಮಾಡುವುದಾಗಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂದೆ ಪಡೆದರು.
ಬಳ್ಳಿಗಾವಿ ಗ್ರಾಮಸ್ಥರ ಪ್ರತಿಭಟನೆ: ಇದೇ ಸಂಧರ್ಪದಲ್ಲಿ ಬಳ್ಳಿಗಾವಿಯ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿ ಈ ಸ್ಟೇಷನ್ಗೆ ನೀಡಿರುವ ಸ್ಥಳ ಬಳ್ಳಿಗಾವಿ ಗ್ರಾಮಕ್ಕೆ ಸೇರಿದ ಗೋಮಾಳವಾಗಿದ್ದು ಗ್ರಾಮಕ್ಕೆ ನಿರಂತರ ವಿದ್ಯುತ್ ನೀಡುವದಾಗಿ ತಿಳಿಸಲಾಗಿತ್ತು. ಆದರೆ ಈವರೆಗೆ ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ಆರೋಪಿಸಿದರು.
ಇನ್ನು ಎರಡು ತಿಂಗಳಲ್ಲಿ ಲೈನ್ ಎಳೆದು ಸಂಪರ್ಕ ಕೊಡುವುದಾಗಿ ಅಧಿಕಾರಿ ಇಂಧುಶೇಖರಯ್ಯ ತಿಳಿಸಿದ್ದಾರೆ ಎನ್ನಲಾಗಿದೆ.
ರಾಜಣ್ಣ, ಬಳ್ಳಿಗಾವಿ ನಾಗರಾಜ್ ಉಜ್ಜಪ್ಪ ಹಾಗು ಹಲವಾರು ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

