ಶಿವಮೊಗ್ಗ

ಎತ್ತುಗಳ ಮೆರವಣಿಗೆ

Published On :

ಶಿರಾಳಕೊಪ್ಪ: ಪಟ್ಟಣದಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಬಸವೇಶ್ವರ ಭಾವಚಿತ್ರದೊಂದಿಗೆ ಸುಂದರವಾಗಿ ಸಿಂಗರಿಸಿದ್ದ ಹಲವಾರು ಜೋಡಿ ಎತ್ತುಗಳ ಪಟ್ಟಣದ ಪ್ರಮುಖ ಬೀದಿಯಲ್ಲಿ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ನಂತರ ಮೆರವಣಿಗೆ ಬಸವೇಶ್ವರ ದೇವಾಲಯಕ್ಕೆ ಆಗಮಿಸಿದ ಮೇಲೆ ಸಭೆ ನಡೆಸಲಾಯಿತು.
ಮೆರವಣಿಗೆ ಮತ್ತು ಸಭೆ ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಸ್ವಾಮೀಜಿ ಸಿದ್ದೇಶ್ವರ ದೇವರು ಮಾತನಾಡಿ, ವಿಶ್ವಗುರು ಬಸವಣ್ಣ ಜಗತ್ತಿಗೆ ಮುದವಾದ ವಿಷಯಗಳನ್ನು ಎಲ್ಲರಿಗೂ ಸುಲಭವಾಗಿ ತಿಳಿಯುವಂತೆ ಸರಳವಾಗಿ ರಚಿಸಿದ್ದಾರೆ.  ಅಂತರಂಗದ ಆನಂದವೇ ಜಂಗಮತತ್ವ ಎಂಬುದನ್ನು ವಿವರಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣದ ವೀರಶೈವ ಸಮಾಜದ ಅಧ್ಯಕ್ಷ ಡಾ.ಮುರಘರಾಜ್, ಪಪಂ ಮಾಜಿ ಅಧ್ಯಕ್ಷರಾದ ಚಂದ್ರಶೇಖರ, ರಟ್ಟಿಹಳ್ಳಿ ಲೋಕೇಶ್, ಕುಬಸದ ರಾಜಣ್ಣ, ಇಂಧುದರ, ಎಚ್.ಎಂ. ಬಸವರಾಜ್, ಕೆ.ವೇದಮೂರ್ತಿ ಹಾಗೂ ಹಲವಾರು ಪ್ರಮುಖರು ಇದ್ದರು.
ಉತ್ತಮವಾಗಿ ಅಲಂಕರಿಸಿ ಕರೆತಂದ ಎತ್ತುಗಳಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.