ಕುಡಿವ ನೀರಿಗೆ ಕ್ರಿಯಾಯೋಜನೆ ತಯಾರಿಸಿ: ಕಿಮ್ಮನೆ
ಕ.ಪ್ರ.ವಾರ್ತೆ ತೀರ್ಥಹಳ್ಳಿ ಮೇ 5
ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಸೋಮವಾರ ಜಿಲ್ಲಾ ಕಾರ್ಯಪಡೆ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ತಕ್ಷಣ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಯೋಜನೆ ರೂಪಿಸಲು ತಕ್ಷಣ ಕ್ರಿಯಾಯೋಜನೆ ತಯಾರಿಸುವಂತೆ ಸೂಚಿಸಿದ ಅವರು, ಸಮಸ್ಯೆ ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ತೀರ್ಥಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯುತ್ ತೀವ್ರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಸಮಸ್ಯೆ ಬಗೆಹರಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಈ ಹಿಂದೆಯೇ ಸೂಚಿಸಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಭೆಯಲ್ಲಿ ಆದೇಶಿಸಿದರು.
ಜಿಲ್ಲೆಯಲ್ಲಿ ಯಾವುದೇ ಕಾರಣದಿಂದ ವಿದ್ಯುತ್ ಇಲ್ಲದೆ ಜನರನ್ನು ಕತ್ತಲೆಯಲ್ಲಿಡುವುದನ್ನು ಸಹಿಸುವುದಿಲ್ಲ ಎಂದ ಸಚಿವರು, ವಿದ್ಯುತ್ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸಮಸ್ಯೆಗಳಿದ್ದರೆ ಸರಿಪಡಿಸುವುದಾಗಿ ತಿಳಿಸಿದರು.
ಹೊಸನಗರ ತಾಲೂಕಿನಲ್ಲಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸಂಬಂಧಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಹಾಗೂ ಸಂಬಂಧಿಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದರು.
ತೀರ್ಥಹಳ್ಳಿ ತಾಲೂಕಿನ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

