ಕೃಷಿ ಅನುದಾನ ಸದ್ಬಳಕೆ ರೈತರ ಕರ್ತವ್ಯ
ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 7
ಕೃಷಿಗೆ ಭೂಮಿಯ ಲಭ್ಯತೆ ಕಡಿಮೆಯಾಗುತ್ತಿದ್ದು, ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಪೂರೈಕೆ ಮಾಡುವುದು ರೈತರ ಮತ್ತು ಕೃಷಿ ವಿಜ್ಞಾನಿಗಳ ಜವಾಬ್ದಾರಿಯಾಗಿದೆ. ಸರ್ಕಾರ ರಕ್ಷಣಾ ಮಂತ್ರಾಲಯ ಹೊರತುಪಡಿಸಿದರೆ ಕೃಷಿ ಮಂತ್ರಾಲಯಕ್ಕೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಪತಿ ಡಾ. ಸಿ. ವಾಸುದೇವಪ್ಪ ಹೇಳಿದರು.
ನಗರದ ಕೃಷಿ ಮತ್ತು ತೋಟಗಾರಿಕೆ ವಿವಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಸಾವಯವ ಭಾಗ್ಯ ಯೋಜನೆಯಡಿ ಸಾವಯವ ಕೃಷಿ ಕುರಿತು ಸರ್ಕಾರೇತರ ಸಂಸ್ಥೆಗಳ ವಿಸ್ತರಣಾ ಕಾರ್ಯಕರ್ತರಿಗೆ ಆಯೋಜಿಸಿರುವ ನಾಲ್ಕು ದಿನಗಳ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಸಾವಯವ ಕೃಷಿ ಇತ್ತೀಚಿನ ದಿನಗಳಲ್ಲಿ ಶಿಫಾರಸಿಗಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮತ್ತು ಕೀಟನಾಶಕ ಬಳಕೆಯಿಂದಾಗಿ ಭೂಮಿಯ ಭೌತಿಕ ಗುಣಧರ್ಮ ಹಾಳಾಗುತ್ತಿದ್ದು, ಇದಕ್ಕೆ ಸಾವಯವ ಕೃಷಿ ಪರಿಹಾರವಾಗಿದೆ ಎಂದರು.
ವ್ಯಕ್ತಿರಿಕ್ತ ಪರಿಣಾಮ: ಸಂಶೋಧನಾ ನಿರ್ದೇಶಕ ಡಾ. ಪಿ. ನಾರಾಯಣಸ್ವಾಮಿ, ಆಹಾರ ಧಾನ್ಯ ಮತ್ತು ಮುಖ್ಯವಾಗಿ ಹಣ್ಣಿನ ಬೆಳೆಗಳಲ್ಲಿ ಶಿಫಾರಸ್ಸಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕಗಳನ್ನು ಸಿಂಪಡಿಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿದ್ದು, ಇದಕ್ಕೆ ಸಾವಯವ ಕೃಷಿ ಪರ್ಯಾಯವಾಗಿದೆ ಎಂದರು.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಮಾರುತಿ, ಜಿಲ್ಲೆಯ ಆಯ್ದ 40 ಹೋಬಳಿಗಳಲ್ಲಿ ಈ ಯೋಜನೆಯಡಿ ರೈತರಿಗೆ ಸಾವಯವ ಕೃಷಿ ಕುರಿತು ತರಬೇತಿ, ರೈತರ ಶೈಕ್ಷಣಿಕ ಪ್ರವಾಸ ಮತ್ತು ವಿವಿಧ ಸಾವಯವ ಪದಾರ್ಥಗಳ ಉತ್ಪಾದನೆಗೆ ಸಂಬಂಧಿಸಿದ ಪರಿಕರ ವಿತರಿಸಲಾಗುವುದೆಂದರು.
ಸಾವಯವ ಕೃಷಿ ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಎಸ್. ಪ್ರದೀಪ್ ಸ್ವಾಗತಿಸಿದರು, ಕಾರ್ಯಕ್ರಮ ಸಂಯೋಜಕ ಬಸವರಾಜ ಬೀರಣ್ಣವರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

