ಮಹಾಗಣಪತಿ ದೇಗುಲ ಜೀರ್ಣೋದ್ಧಾರಕ್ಕೆ 2 ಕೋಟಿ
ಕ.ಪ್ರ.ವಾರ್ತೆ ್ಣ ಸಾಗರ ್ಣ ಮೇ 7
ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವಾಗಿ ರೂಪಿಸುವ ನಿಟ್ಟಿನಲ್ಲಿ 2 ಕೋಟಿಗೂ ಹೆಚ್ಚಿನ ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಬುಧವಾರ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ, ನಗರಸಭೆಯಲ್ಲಿ ವಿವಿಧ ಕಾಮಗಾರಿ ಕುರಿತು ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿಥಿಲಾವಸ್ಥೆಯಲ್ಲಿದ್ದ ಗಣಪತಿ ದೇವಸ್ಥಾನದ ಮುಖಮಂಟಪ, ಚಂದ್ರಶಾಲೆ ಹಾಗೂ ಅರ್ಚಕರ ವಸತಿಗೃಹವನ್ನು ನೆಲಸಮಗೊಳಿಸಿ ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಪಟ್ಟಣ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೆರೆಗಳ ಒತ್ತುವರಿ ಬಗ್ಗೆ ಸಾರ್ವಜನಿಕರ ದೂರುಗಳಿದೆ. ಕೆರೆ ಒತ್ತುವರಿ ತೆರವುಗೊಳಿಸಲು ನ್ಯಾಯಾಲಯದ ಆದೇಶವಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಆದೇಶ ನೀಡಿದರು.
ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಹೈಜೆನಿಕ್ ಮೀನು ಮಾರುಕಟ್ಟೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಲಿ ಒಣಮೀನು ಮಾರುಕಟ್ಟೆ ಇರುವ ಜಾಗವನ್ನು ಈ ಯೋಜನೆಗೆ ಗುರುತಿಸಲಾಗಿದೆ.
ನೂತನ ಮಾರುಕಟ್ಟೆ ಚಿಂತನೆ: ಇಂದಿರಾಗಾಂಧಿ ಮಹಿಳಾ ಕಾಲೇಜಿನ ಸಮೀಪದ ವಿಶಾಲ ಜಾಗದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅನುದಾನದಲ್ಲಿ 1.60 ಲಕ್ಷ ವೆಚ್ಚದಲ್ಲಿ ಸಂತೆ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಮಾರ್ಕೆಟ್ ರಸ್ತೆಯ ಹಳೆ ಹಾಪ್‌ಕಾಮ್ಸ್ ಕಟ್ಟಡವನ್ನು ನೆಲಸಮಗೊಳಿಸಿ ನೂತನವಾಗಿ ತರಕಾರಿ ಮಾರುಕಟ್ಟೆ ನಿರ್ಮಿಸುವ ಚಿಂತನೆ ಹೊಂದಿದೆ ಎಂದರು.
ಮುಂಗಾರು ಪ್ರಾರಂಭವಾಗಿದ್ದು, ನಗರಸಭೆ ಅಭಿಯಂತರರು ನಗರ ಪ್ರದಕ್ಷಿಣೆ ಮಾಡಿ, ಚರಂಡಿ, ರಸ್ತೆ ಹಾಗೂ ಮಳೆಗಾಲದಲ್ಲಿ ನೀರು ಉಕ್ಕಿ ಹಾನಿಯಾಗುವ ಪ್ರದೇಶಗಳ ಪಟ್ಟಿ ಮಾಡಿ ಅವುಗಳನ್ನು ಸರಿಪಡಿಸಿ. ನಗರಸಭೆ ವತಿಯಿದ ಅಂಗನವಾಡಿಗಳಿಗೆ ಕುಡಿಯುವ ನೀರು ಹಾಗೂ ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಸೂಚನೆ ನೀಡಿದರು.
ನಗರಸಭೆ ಅಧ್ಯಕ್ಷೆ ಎನ್. ಲಲಿತಮ್ಮ, ಸದಸ್ಯರಾದ ತೀ.ನ.ಶ್ರೀನಿವಾಸ್, ಜಿ.ಕೆ. ಭೈರಪ್ಪ, ಎನ್. ಶ್ರೀನಾಥ್, ರವಿ ಜಂಬಗಾರು, ಗಣಾಧೀಶ್, ಪೌರಾಯುಕ್ತ ಚಂದ್ರಶೇಖರ್, ಅಭಿಯಂತರರಾದ ಕೆ.ಎಚ್. ನಾಗಪ್ಪ, ವಿಠ್ಠಲ್ ಹೆಗಡೆ, ರಾಜೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

