ರೇಲ್ವೆ ನಿಲ್ದಾಣ ಅಭಿವೃದ್ಧಿಗೆ ಶೀಘ್ರ ಪ್ರಸ್ತಾವನೆ: ಕಾಗೋಡು
ಸಾಗರ: ಇಲ್ಲಿನ ಜಂಬಗಾರು ರೇಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರೇಲ್ವೆ ಸಚಿವವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ರೇಲ್ವೆ ನಿಲ್ದಾಣಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಸಿಡಿಮಿಡಿಗೊಂಡ ಅವರು, ಮಲೆನಾಡಿನಂತಹ ಪ್ರದೇಶದಲ್ಲಿ ಜನರು ಪ್ರಜ್ಞಾವಂತರಿದ್ದು, ಇಂತಹ ಅವ್ಯವಸ್ಥೆ ಸಹಿಸಿಕೊಳ್ಳುವುದಿಲ್ಲ ಎಂದು ರೇಲ್ವೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಈಗಾಗಲೇ ಸಾಗರ ಜಂಬಗಾರು ರೇಲ್ವೆ ನಿಲ್ದಾಣ ಅಭಿವೃದ್ಧಿಗೆ ಕೇಂದ್ರ ರೇಲ್ವೆ ಸಚಿವರ ಹತ್ತಿರ ಚರ್ಚೆ ನಡೆಸಲಾಗಿದೆ. ರೇಲ್ವೆ ನಿಲ್ದಾಣದ ಚಾವಣಿ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳುವಾಗ ಇಲಾಖೆ ಅಧಿಕಾರಿಗಳು ಗುಣಮಟ್ಟದ ಬಗ್ಗೆ ಹೆಚ್ಚಿನ ಗಮನ ನೀಡಿಲ್ಲ. ಮಳೆಗಾಲದಲ್ಲಿ ರೇಲ್ವೆ ನಿಲ್ದಾಣದಲ್ಲಿ ಸೋರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ತಕ್ಷಣ ರಿಪೇರಿ ಕಾರ್ಯ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ತುರ್ತು ಅಭಿವೃದ್ಧಿ: ರೇಲ್ವೆ ಸ್ಟೇಷನ್ ಮಾಸ್ಟರ್ಗೆ 2 ವಸತಿ ಗೃಹ ಹಾಗೂ ಸಿಬ್ಬಂದಿಗೆ 6 ವಸತಿ ಗೃಹ ನಿರ್ಮಾಣ, ಸಾರ್ವಜನಿಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳುವಂತೆ ರೇಲ್ವೆ ಅಧಿಕಾರಿಗಳಿಗೆ ತಿಳಿಸಿದರು.
ರೇಲ್ವೆ ನಿಲ್ದಾಣದ ಸುತ್ತಲೂ ಕಾಂಪೌಂಡ್ ನಿರ್ಮಾಣ, ಉದ್ಯಾನವನ ನಿರ್ಮಾಣ, ಪ್ರಯಾಣಿಕರಿಗೆ ಕುಳಿತು ಕೊಳ್ಳಲು ಆಸನದ ವ್ಯವಸ್ಥೆ ಸೇರಿದಂತೆ ವಿವಿಧ ಕೆಲಸಗಳನ್ನು ತುರ್ತಾಗಿ ಕೈಗೊಳ್ಳುವಂತೆ ದೂರವಾಣಿ ಮೂಲಕ ಶಿವಮೊಗ್ಗ ರೇಲ್ವೆ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

