ಶಿವಮೊಗ್ಗ

ಮತ ಎಣಿಕೆ ದಿನ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ

Published On :

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ಕಾರ್ಯವು ಮೇ 16ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಅಂದು ಮತ ಎಣಿಕೆ ನಡೆಯುವ ಸ್ಥಳದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ.
ಅಭ್ಯರ್ಥಿಗಳು, ಅವರ ಬೆಂಬಲಿಗರು ಗುಂಪುಗೂಡಿ ಘೋಷಣೆ ಮತ್ತು ಗಲಾಟೆ ನಡೆಸುವ ಸಾಧ್ಯತೆಗಳಿದ್ದು, ಸಾರ್ವಜನಿಕ ನೆಮ್ಮದಿಗೆ ಭಂಗ ಬರುವ ಸಂದರ್ಭವಿರುವುದರಿಂದ ಮತ ಎಣಿಕೆ ನಡೆಯುವ ಸ್ಥಳವಾದ ಎಸ್.ಆರ್. ನಾಗಪ್ಪ ಶ್ರೇಷ್ಠಿ ಮೆಮೋರಿಯಲ್ ಕಾಲೇಜ್ ಹಾಗೂ ನ್ಯಾಷನಲ್ ಪಿಯು ಕಾಲೇಜು, ಎನ್ಇಎಸ್ ಕ್ಯಾಂಪಸ್ ಸುತ್ತಮುತ್ತಲಿನ 200 ಮೀ. ಫಾಸಲೆಯವರೆಗೆ ಮೇ 16ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿಪುಲ್ ಬನ್ಸಾಲ್ ಆದೇಶ ಹೊರಡಿಸಿದ್ದಾರೆ.
ಐದು ಮತ್ತು ಐದಕ್ಕಿಂತ ಹೆಚ್ಚು ಜನರು ನಿಷೇಧಿತ ಅವಧಿಯಲ್ಲಿ ಗುಂಪುಗೂಡುವುದು, ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಪ್ರಚೋದನಾಕಾರಿ ಹೇಳಿಕೆ ನೀಡುವುದು ಹಾಗೂ ಮಾರಕಾಸ್ತ್ರ ಹಿಡಿದು ಓಡಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪಾನ ನಿಷೇಧ: ಮತ ಎಣಿಕೆಯ ದಿನ ಸಂಪೂರ್ಣ 24 ಗಂಟೆಗಳನ್ನು ಪಾನ ನಿರೋಧ ಅವಧಿಯೆಂದು ಘೋಷಿಸಲು ಅವಕಾಶವಿದ್ದು, ಮತ ಎಣಿಕೆಯ ದಿನದಂದು ಶಾಂತಿಯುತವಾಗಿ ನಡೆಯಬೇಕೆಂಬ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು  ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ರೀತಿಯ ಮದ್ಯ ತಯಾರಿಕೆ, ಮಾರಾಟ, ಸರಬರಾಜು ಮತ್ತು ಸಾಗಾಟ ನಿಷೇಧಿಸಿ ಮೇ16 ಶುಷ್ಕ ದಿನವೆಂದು ಘೋಷಿಸಿದ್ದಾರೆ.
ಮೇ 15ರ ಮಧ್ಯರಾತ್ರಿ 12ರಿಂದ ಮೇ 16ರ ಮಧ್ಯರಾತ್ರಿ 12ರವರೆಗೆ ಎಲ್ಲಾ ವಿಧದ ಮದ್ಯದ ಸನ್ನದು ಮಾರಾಟ ಮಳಿಗೆ, ಮದ್ಯ ಮಾರಾಟ ಡಿಪೋಗಳನ್ನು ಹಾಗೂ ಮದ್ಯ ತಯಾರಿಕಾ ಘಟಕ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.