ತುಮರಿ ಆಸ್ಪತ್ರೆಗೆ ಸಿಕ್ತು ವೈದ್ಯ ಸೇವೆ
ಕ.ಪ್ರ.ವಾರ್ತೆ ್ಣ ಸಾಗರ ್ಣ ಮೇ 14
ವೈದ್ಯರ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಶರಾವತಿ ಹಿನ್ನೀರಿನ ಜನಪರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಜಯ ಸಿಕ್ಕಿದೆ.
ವೈದ್ಯರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ತುಮರಿ ಆರೋಗ್ಯ ಕೇಂದ್ರಕ್ಕೆ ವೈದ್ಯ ಸೇವೆಯನ್ನು ಒದಗಿಸಿದೆ. ನಾಗರೀಕರ ಹೋರಾಟದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾ ಆರೋಗ್ಯ ಇಲಾಖೆ ಮನವಿ ಮೇರೆಗೆ ವೈದ್ಯರನ್ನು ನೇಮಕ ಮಾಡಲಾಗಿದೆ. ಮಂಗಳವಾರದಿಂದ ಹೊರರೋಗಿಗಳ ವಿಭಾಗ ಆರಂಭಗೊಂಡಿದೆ.
ಸೋಮವಾರ ತುಮರಿಗೆ ಭೇಟಿ ನೀಡಿದ ತಂಡದಲ್ಲಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ. ಅಚ್ಚುತ್ ಇನ್ನಿತರರು ಹಾಜರಿದ್ದು, ಹೋರಾಟ ವೇದಿಕೆ ಸದಸ್ಯರ ಜೊತೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಡಾ.ಶ್ರೀನಿವಾಸ್ ರಾಜ್ಯಕ್ಕೆ ಬೆಳಕು ನೀಡಿದ ಪ್ರದೇಶದಲ್ಲಿ ವೈದ್ಯರ ಕೊರತೆ ಗಮನಿಸಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಈ ನಿರ್ಧಾರಕ್ಕೆ ಬಂದಿದೆ. ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಜೊತೆಗೆ ಪ್ರತಿ ತಿಂಗಳು ಆರೋಗ್ಯ ಶಿಬಿರವನ್ನು ನಡೆಸಲು ಉದ್ದೇಶಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ವೈದ್ಯಸೇವೆ ಲಭ್ಯ ಇರುವ ಜೊತೆಗೆ ಕಾರ್ಯನಿರತ ವೈದ್ಯರು ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವುದರಿಂದ ಹಗಲು ಮತ್ತು ರಾತ್ರಿ ಸೇವೆ ನೀಡಲಿದ್ದಾರೆ ಎಂದು ಹೇಳಿದರು.
ವೈದ್ಯರಾದ ಡಾ.ರಂಜಿತ್ ಶೆಟ್ಟಿ, ಡಾ.ರೂಪೇಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಮಹೇಶ್ ಇನ್ನಿತರರು ಹಾಜರಿದ್ದರು. ದ್ವೀಪದ ಆರೋಗ್ಯ ಸಮಸ್ಯೆಗೆ ಸ್ಪಂದಿಸಿದ ಜನಪ್ರತಿನಿಧಿಗಳಿಗೆ, ಆರೋಗ್ಯ ಇಲಾಖೆಗೆ ಜನಪರ ಹೋರಾಟ ವೇದಿಕೆ ಅಭಿನಂದನೆ ಸಲ್ಲಿಸಿದ್ದು, ಆದಷ್ಟು ಶೀಘ್ರವಾಗಿ ಹಿನ್ನೀರಿನ ಜನರ ಮತ್ತೊಂದು ಬೇಡಿಕೆಯಾದ ಆರೋಗ್ಯ ಕವಚ- 108 ಆ್ಯಂಬ್ಯುಲೆನ್ಸ್ ವಾಹನ ಬಿಡುವಂತೆ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

