ಕ್ರಿಕೆಟ್ ತರಬೇತಿ ಶಿಬಿರ ಮುಕ್ತಾಯ
ಶಿವಮೊಗ್ಗ: ಎಂ.ವಿ. ಶೇಷಾಶಲ ಶೆಟ್ಟಿ ಕ್ರಿಕೆಟ್ ಅಕಾಡೆಮಿ ವತಿಯಿಂದ ಒಂದು ತಿಂಗಳ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿ ನಾರಾಯಣ ರಾವ್, ಶಿವಮೊಗ್ಗದಲ್ಲಿ ಇತ್ತೀಚೆಗೆ ಕ್ರಿಕೆಟ್ಗೆ ಸಾಕಷ್ಟು ತರಬೇತಿ ಕಾರ್ಯಕ್ರಮ ಹಾಗೂ ಎಲ್ಲಾ ಸೌಲಭ್ಯ ನೀಡುತ್ತಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆದು ಉತ್ತಮ ಕ್ರೀಡಾಪಟುಗಳಾಗಬೇಕು ಎಂದರು.
ಅಕಾಡೆಮಿ ಅಧ್ಯಕ್ಷ ಡಿ.ಎಸ್. ಅರುಣ ಮಾತನಾಡಿ, ಅಕಾಡೆಮಿಯು ಪ್ರಾರಂಭವಾದ ಕೇವಲ ಎರಡೇ ವರ್ಷಗಳಲ್ಲಿ ಸಾಕಷ್ಟು ಬೆಳವಣಿಗೆ ಹೊಂದಿದ್ದು, ಕ್ರೀಡಾಪಟುಗಳಿಗೆ ಬೇಕಾದ ಎಲ್ಲಾ ವಸ್ತುಗಳನ್ನು ಸಂಸ್ಥೆಯು ನೀಡಿದೆ, ಶಿಬಿರವು ವರ್ಷಷವಿಡೀ ನಡೆಯುತ್ತಿದ್ದು, ಇದರ ಸುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಅಕಾಡೆಮಿ ಸದಸ್ಯರಾದ ಯಶವಂತಕುಮಾರ ನಾಯಕ್ ಸಂಸ್ಥೆಯ ಬಗ್ಗೆ ವರದಿ ನೀಡಿದರು.
ಮುಖ್ಯ ತರಬೇತುದಾರ ಸ್ವಾಮಿಕುಮಾರ್ ಮಾತನಾಡಿ, ಅಕಾಡೆಮಿಯ ಹಲವು ಮಕ್ಕಳು ಈಗಾಗಲೇ ಜಿಲ್ಲಾ ಹಾಗೂ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದರು.
ಅಶ್ವತ್ಥನಾರಾಯಣ ಶೆಟ್ಟಿ, ನಾಗರಾಜ್, ಶರಶ್ಚಂದ್ರ ಪ್ರಭು, ರವೀಂದ್ರನಾಥ್, ಸುಧೀಂದ್ರ, ಮಂಜುನಾಥ ಮತ್ತು ಶಿಬಿರಾರ್ಥಿಗಳು ಇದ್ದರು. ಕಿರಣ್ ಸ್ವಾಗತಿಸಿದರು. ಪಿ.ಕೆ. ರಘುನಂದನ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

