ತ್ಯಾಗದಿಂದ ಸೇವೆಯಲ್ಲಿ ಯಶ
ಕ.ಪ್ರ.ವಾರ್ತೆ ಸಾಗರ ಮೇ 21 ತ್ಯಾಗ ಮನೋಭಾವ ಇದ್ದವರು ಮಾತ್ರ ಯಶಸ್ವಿಯಾಗಿ ಸೇವೆ ಸಲ್ಲಿಸಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ತಾಪಂ ಸುವರ್ಣಸೌಧದಲ್ಲಿ ಬುಧವಾರ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಉಪಗ್ರಹ ಮೂಲಕ ತರಬೇತಿ ಶಿಬಿರವನ್ನು ಶಿಬಿರಾರ್ಥಿಗಳಿಗೆ ಮಾಹಿತಿ ಕೈಪಿಡಿ ಒದಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸೇವೆ ಮಹತ್ವದ್ದು: ಆಶಾ ಕಾರ್ಯಕರ್ತೆಯರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ನಿಮ್ಮ ಸೇವೆಯನ್ನು ಹೆಚ್ಚು ನಿರೀಕ್ಷಿಸುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿ ಪತ್ತೆಹಚ್ಚಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಜೊತೆಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ಅವರನ್ನು ಕರೆದೊಯ್ಯುವ ಮಹತ್ವಪೂರ್ಣ ಕಾರ್ಯವನ್ನು ನೀವು ಮಾಡುತ್ತಿದ್ದೀರಿ. ವೇತನ ಸೇರಿದಂತೆ ನಿಮಗೆ ಇರುವ ಮೂಲ ಸೌಲಭ್ಯ ಕೊರತೆ ಕುರಿತು ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ಕಾಗೋಡು ಭರವಸೆ ನೀಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇಂತಹ ಯೋಜನೆ ಯಶಸ್ವಿಯಾಗಬೇಕಾದರೆ ಸ್ಥಳೀಯ ಸಮಿತಿಗಳಿಗೆ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ಇರಬೇಕು. ಸದ್ಯದಲ್ಲಿಯೇ ತಾಲೂಕಿನ ಆಶಾ ಕಾರ್ಯಕರ್ತೆಯರ ಸಭೆ ಕರೆದು ಅವರಿಂದ ಇನ್ನಷ್ಟು ಪರಿಣಾಮಕಾರಿ ಕೆಲಸ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದರು.
ಇನ್ನಷ್ಟು ಸೌಲಭ್ಯ ಅಗತ್ಯ: ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ. ಅಚ್ಯುತ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಹಲವು ಸಮಸ್ಯೆ ನಡುವೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಿದರೆ ಅವರಿಂದ ಹೆಚ್ಚಿನ ಸೇವೆ ನಿರೀಕ್ಷೆ ಮಾಡಬಹುದು. ತಾಲೂಕಿನಾದ್ಯಂತ ಸದ್ಯದಲ್ಲಿಯೇ ಡೆಂಘೀ, ಚಿಕೂನ್ ಗುನ್ಯಾ ಹಾಗೂ ಸೊಳ್ಳೆ ಹಾಗೂ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗ ಕುರಿತು ಜನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.
ತಾಪಂ ಸದಸ್ಯ ಮಹಾಬಲೇಶ್ವರ ಕುಗ್ವೆ, ಕಾರ್ಯನಿರ್ವಹಣಾಧಿಕಾರಿ ಟಿ. ಸಿದ್ದಪ್ಪ, ಆರೋಗ್ಯ ಇಲಾಖೆಯ ನಾಗರತ್ನ, ಸುರೇಶ್, ಯಶೋದ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

