ಶಿವಮೊಗ್ಗ

ಸುಪ್ರೀಂ ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಆಗ್ರಹ

Published On :

ಕ.ಪ್ರ.ವಾರ್ತೆ , ಶಿಕಾರಿಪುರ , ಮೇ 21
ಪ್ರತಿ ಮಗುವಿಗೆ ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿ ದೊರೆತರೆ ಕಲಿಕೆಯ ಒತ್ತಡವಿಲ್ಲದೆ ಉತ್ತಮ ಫಲಿತಾಂಶ ಲಭಿಸಲಿದೆ ಎಂಬುದು ಮನೋವಿಜ್ಞಾನಿಗಳ ಸ್ಪಷ್ಟ ಅಭಿಪ್ರಾಯವಾಗಿದ್ದು, ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ ವ್ಯಕ್ತಪಡಿಸಿರುವುದು ಅತ್ಯಂತ ವಿಷಾದಕರ ಎಂದು ಇಲ್ಲಿನ ಸವಿತಾ ಯುವಕ ಸಂಘದ ಅದ್ಯಕ್ಷ ಎಂ.ಎನ್. ಶ್ರೀನಿವಾಸ್ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಸವಿತಾ ಯುವಕ ಸಂಘ ಹಾಗೂ ಸವಿತಾ ಸಮಾಜದ ವತಿಯಿಂದ ಸುಪ್ರೀಂ ಕೋರ್ಟ್ ಕನ್ನಡ ಕಡ್ಡಾಯಗೊಳಿಸಿರುವುದನ್ನು ಪ್ರತಿಭಟಿಸಿ ಹಾಗೂ ರಾಜ್ಯ ಸರ್ಕಾರ ಕನ್ನಡವನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ನಡೆದ ಸಭೆಯಲ್ಲಿ ಮಾತನಾಡಿದರು.
ಸೂಕ್ತ ಕಾನೂನು ಅವಶ್ಯಕ: ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿ ಆ ಮೂಲಕ ಸ್ಥಳೀಯ ಭಾಷೆಗಳಿಗೆ ಆದ್ಯತೆಯನ್ನು ಕಾನೂನಿನ ಮೂಲಕ ಕಲ್ಪಿಸಲಾಗಿದ್ದು, ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಗೆ ಸೂಕ್ತ ಕಾನೂನು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಇದೀಗ ಸುಪ್ರೀಂ ಕೋರ್ಟ್ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳುವ ಹವಣಿಕೆಯಲ್ಲಿ ಖಾಸಗಿ ವಿದ್ಯಾಸಂಸ್ಥೆಗಳು ಮುಂದಾಗಿದೆ ಎಂದರು. ಕನ್ನಡ ನಾಡಿನಲ್ಲಿ ಕನ್ನಡದ ಕಗ್ಗೊಲೆ ಮಾಡಿ ಇಂಗ್ಲೀಷ್ ಭಾಷೆ ಹೇರಿಕೆಗೆ ಮುಂದಾಗುತ್ತಿರುವ ಖಾಸಗಿ ವಿದ್ಯಾಸಂಸ್ಥೆಗಳ ವಿರುದ್ಧ ನಾಡಿನ ಎಲ್ಲಾ ಪ್ರಜ್ಞಾವಂತರು ವಿರೋಧಿಸುವುದು ಇಂದಿನ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸುಪ್ರೀಂ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಹಿತ ಕನ್ನಡ ಕಡ್ಡಾಯಕ್ಕೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್ ಬೀಬಾ ರವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜಿಪಂ ಸದಸ್ಯ ಈಸೂರು ಬಸವರಾಜ್, ಸವಿತಾ ಸಮಾಜದ ಅಧ್ಯಕ್ಷ ಈಶ್ವರಪ್ಪ, ಮುಖಂಡ ಸಿ.ಎಸ್. ಜಯರಾಜ್, ನಾಗರಾಜ್, ವೆಂಕಟೇಶ್, ಸೋಮಶೇಖರ್, ಕೃಷ್ಣಪ್ಪ, ಪರಶುರಾಮ, ಮಹೇಶ್ವರಪ್ಪ, ಶ್ರೀನಿವಾಸ, ಉಮೇಶ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.