ಬಯೋವುಟ್ರಿಕ್ ಉದಾಸೀನ ಮಾಡಿದರೆ ಶಿಸ್ತುಕ್ರಮ
ವಿಶೇಷ ವರದಿ
ಕ.ಪ್ರ.ವಾರ್ತೆ ಶಿವಮೊಗ್ಗ ಮೇ 25
ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಶಿಸ್ತು ತರುವ ಉದ್ದೇಶದಿಂದ ಜಾರಿಗೆ ತಂದ ಬಯೋವುಟ್ರಿಕ್ ಹಾಜರಾತಿ ವ್ಯವಸ್ಥೆ ಇನ್ನೂ ನಿಖರವಾಗಿ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಯಾವ ಸ್ಥಳೀಯ ಸಂಸ್ಥೆ ಬಯೋವುಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರುವುದಿಲ್ಲವೋ ಸಂಬಂಧಪಟ್ಟ ಅಧಿಕಾರಿಯ ಮೇಲೆ ಶಿಸ್ತುಕ್ರಮಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಿರಿಯ ಅಧಿಕಾರಿಗಳು ನೀಡುವ ಮಾಹಿತಿಯಂತೆ ಮೂರು ತಿಂಗಳ ಹಿಂದೆಯೇ ಬಯೋವುಟ್ರಿಕ್ ವ್ಯವಸ್ಥೆ ಜಾರಿಯಾಗಬೇಕಾಗಿತ್ತು. ಆದರೆ, ಲೋಕಸಭಾ ಚುನಾವಣೆ ಹಿನ್ನೆಲೆ ಮತ್ತು ಬಯೋವುಟ್ರಿಕ್ ಯಂತ್ರದಲ್ಲಿ ಅಳವಡಿಸಲಾದ ಸಾಫ್ಟ್ವೇರ್ನಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದಾಗಿ ಅನುಷ್ಠಾನ ತಡವಾಗಿತ್ತು. ಇದೀಗ ಎಚ್ಚರಿಕೆ ನೀಡಲಾಗಿದ್ದು, ಜೂನ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಬಯೋವುಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಎಚ್ಚರಿಕೆ: ಸರ್ಕಾರದ ಹಂತದಲ್ಲಿ ಯೋಜನೆ ಜಾರಿಗೆ ಬಂದರೂ ಕೆಳ ಹಂತದಲ್ಲಿ ಅನುಷ್ಠಾನ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅಧಿಕಾರಿಗಳು ಉದಾಸೀನ ಮಾಡದೇ ಬಯೋವುಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಸೂಚಿಸಿ ಆದೇಶಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ (ಪಂ.ರಾ) ಗಂಗಾರಾಂ ಬಡೇರಿಯ ಅವರು ಎಲ್ಲಾ ಜಿಲ್ಲಾ ಪಂಚಾಯಿತಿಗಳಿಗೆ ಬರೆದಿರುವ ಪತ್ರದಂತೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಬಯೋ ಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಅಳವಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋರಲಾಗಿತ್ತು. ಆದರೆ, ಈವರೆಗೂ ರಾಜ್ಯದ ಕೆಲವು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಬಯೋ ಮೆಟ್ರಿಕ್ ಪದ್ಧತಿಯನ್ನು ಅಳವಡಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಶಿಸ್ತು ಕ್ರಮಕ್ಕೆ ಸೂಚನೆ: ಬಯೋ ಮೆಟ್ರಿಕ್ ಪದ್ಧತಿ ಅಳವಡಿಸದಿರುವ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ನೌಕರರ ವಿರುದ್ಧ ತಮ್ಮ ಹಂತದಲ್ಲಿಯೇ ಶಿಸ್ತು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ಬಯೋ ಮೆಟ್ರಿಕ್ ವ್ಯವಸ್ಥೆ ಅಳವಡಿಸದೇ ಇರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ವಿವರ, ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿದ್ದರೂ ಸಹ ನೋಂದಣಿ ಮಾಡಿಸದೇ ಇರುವ ಪಂಚಾಯಿತಿಗಳ ವಿವರ ನೀಡುವಂತೆ ಸೂಚನೆ ನೀಡಿದ್ದಾರೆ.
ಜೂನ್ ಅಂತ್ಯದೊಳಗೆ ಜಾರಿ...
ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್, ಎರಡು ತಿಂಗಳ ಹಿಂದೆಯೇ ಯೋಜನೆ ಅನುಷ್ಠಾನವಾಗಬೇಕಾಗಿತ್ತು, ಆದರೆ ಸಾಫ್ಟ್ವೇರ್ನಲ್ಲಿ ತಾಂತ್ರಿಕ ಸಮಸ್ಯೆ ಇದ್ದ ಕಾರಣ ತಡವಾಗಿದೆ. ಜೊತೆಗೆ ಬಯೋವುಟ್ರಿಕ್ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯ ಮುಂದಿನ ವಾರದಲ್ಲಿ ಆರಂಭವಾಗಲಿದ್ದು, ಜೂನ್ ಅಂತ್ಯದೊಳಗೆ ಬಯೋವುಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

