ವರದಕ್ಷಿಣೆ ಕಿರುಕುಳ: ನೇಣಿಗೆ ಶರಣು
ಶಿವಮೊಗ್ಗ: ಸಂತೇಕಡೂರು ಸಮೀಪದ ಹಾರೋಘಟ್ಟ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂದು ತಿಂಗಳ ಹಿಂದೆ ವಿವಾಹವಾಗಿದ್ದ ನಾಗಮಣಿ (25) ನೇಣಿಗೆ ಶರಣಾದವರಾಗಿದ್ದಾರೆ. ಈಕೆ ಐದು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ತನಗೆ ಪತಿ, ಅತ್ತೆ, ಮೈದುನ ಹಾಗೂ ಸಂಬಂಧಿಯೊಬ್ಬರು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಪತ್ರದಲ್ಲಿ ವಿವರಿಸಿದ್ದಾರೆ.
ಡೆತ್ ನೋಟ್ ಆಧಾರದ ಮೇಲೆ ಪತಿ ಇಂದ್ರಜಿತ್, ಅತ್ತೆ ಮಂಜಮ್ಮ, ಮೈದುನ ಪ್ರಕಾಶ್ ಹಾಗೂ ಸಂಬಂಧಿ ನಾಗರಾಜ್ ಎಂಬುವವರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಿದ್ದಾರೆ.
ಆರೋಪಿಗಳ ಬಂಧನಕ್ಕೆ ಆಗ್ರಹ
ಸೊರಬ: ತಾಲೂಕು ಹಂಚಿ ಗ್ರಾಪಂ ನೀರಗಂಟಿ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಕೊಲೆ ಪ್ರಯತ್ನ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಹಾಗೂ ಕುಡಿಯುವ ನೀರು ಒದಗಿಸಬೇಕು ಎಂದು ಹಂಚಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು ಆನವಟ್ಟಿ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರ ಸಲ್ಲಿಸಿದದ ಮನವಿ ಸ್ವೀಕರಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಡಿ.ನಾಗರಾಜ್ ಹಾಗೂ ಆನವಟ್ಟಿ ಪೊಲೀಸ್ ಠಾಣೆ ಪಿಎಸ್ಐ ರಾಜು ಆರೋಪಿಗಳ ಪತ್ತೆಗೆ ಇಲಾಖೆ ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

