ಶಿವಮೊಗ್ಗ

ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಆರಂಭ

Published On :

ಕ.ಪ್ರ.ವಾರ್ತೆ    ಶಿವಮೊಗ್ಗ    ಮೇ 30
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನಾಲ್ಕು ವರ್ಷಗಳ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದ ವಿವಿಧ ವಲಯಗಳಲ್ಲಿ ಶೇ.100ರಷ್ಟು ಖಚಿತವಾಗಿ ಉದ್ಯೋಗಾವಕಾಶ ಲಭ್ಯವಾಗಲಿವೆ ಎಂದು ಬೆಂಗಳೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಯೋಜನೆ ಮತ್ತು ಆಡಳಿತ ವಿಭಾಗದ ವ್ಯವಸ್ಥಾಪಕ ಕೆ.ಎಲ್.ಪ್ರಕಾಶ್ ಹೇಳಿದರು.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ತರಬೇತಿಗಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಅನುಮೋದನೆ ಪಡೆದ ಟೂಲ್ ಅಂಡ್ ಡೈ ಮೇಕಿಂಗ್, ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್, ಮೆಕ್ಟ್ರಾನಿಕ್ಸ್, ಟೂಲ್‌ಡಿಸೈನ್, ಟೂಲ್ ಎಂಜಿನಿಯರಿಂಗ್ ಮತ್ತು ವಿಶೇಷವಾಗಿ ಮಹಿಳೆಯರಿಗಾಗಿರುವ ಎಲೆಕ್ಟ್ರಾನಿಕ್ಸ್ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದರು.
ಅರ್ಜಿ ವಿತರಣೆ: ಶಿವಮೊಗ್ಗ ಕೇಂದ್ರದಲ್ಲಿ ಜೂನ್ 15ರವರೆಗೆ ಅರ್ಜಿಗಳನ್ನು ವಿತರಿಸಲಾಗುತ್ತದೆ. ನಂತರ ಮೆರಿಟ್, ರೋಸ್ಟರ್ ವ್ಯವಸ್ಥೆಯಡಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದರು.  ಪತ್ರಿಕಾಗೋಷ್ಠಿಯಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ನಾಗರಾಜ್, ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸಂಪರ್ಕ ಸಂಖ್ಯೆ- 9448307027, 08182 246054.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.