ತುಮಕೂರು

ಶಿರಾ ರಸ್ತೆ ವಿಸ್ತರಣೆ ವಿರುದ್ಧದ ಅರ್ಜಿ ವಜಾ

Published On :

ಬೆಂಗಳೂರು:  ತುಮಕೂರು ಜಿಲ್ಲೆ ಶಿರಾ ರಸ್ತೆ ವಿಸ್ತರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಸ್ತೆ ವಿಸ್ತರಣೆಯಿಂದ ಅಲ್ಲಿನ ಐತಿಹಾಸಿಕ ಕೋಟೆಗೆ ಹಾನಿ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಎಲ್. ಚಂದ್ರಶೇಖರಯ್ಯ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರ, ಶಿರಾದಲ್ಲಿ ಸುಮಾರು 40 ವರ್ಷಗಳ ಹಿಂದೆಯೇ ರಸ್ತೆಯನ್ನು ನಿರ್ಮಿಸಲಾಗಿದೆ. ಕೋಟೆಯನ್ನು 2010ರಲ್ಲಷ್ಟೇ ಐತಿಹಾಸಿಕ ಎಂದು ಗುರುತಿಸಲಾಗಿದೆ. ರಸ್ತೆ ಕಾಮಗಾರಿಯಿಂದ ಕೋಟೆಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿತು. ಇದನ್ನು ಪರಿಗಣಿಸಿದ ಮುಖ್ಯ ನ್ಯಾ. ವಘೇಲ, ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ಬದಲಿಗೆ ವೈಯಕ್ತಿಕ ಹಿತಾಸಕ್ತಿಯೇ ಜಾಸ್ತಿ ಕಂಡುಬರುತ್ತಿದೆ ಎಂದು ಆಕ್ಷೇಪಿಸಿ ಅರ್ಜಿವಜಾಗೊಳಿಸಿದೆ. ಒತ್ತುವರಿ ಆರೋಪಗಳ ಮೇಲೆ ಬಡವರ ಮನೆಗಳನ್ನು ಮಾಹಿತಿ ನೀಡದೆ ಒಡೆದು ಉರುಳಿಸಲಾಗುತ್ತದೆ. ಆಗೆಲ್ಲಾ ಮಾತನಾಡದ ನೀವು ಇಂತಹ ಪ್ರಕರಣಗಳಿಗೆ ಕೋರ್ಟ್ ಮೆಟ್ಟಿಲೇರುತ್ತೀರಿ ಎಂದು ಪೀಠ ಕಿಡಿಕಾರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.