ಮತದಾನದ ಕುರಿತು ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ
ಕ.ಪ್ರ. ವಾರ್ತೆ ತುಮಕೂರು ಏ.3
ಚುನಾವಣಾ ಆಯೋಗದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಯೋಜನೆ ಅಂಗವಾಗಿ ಜಿಲ್ಲಾಡಳಿತ ತುಮಕೂರು ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತುಮಕೂರು ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಮತದಾರರಿಗೆ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ನಾಗವಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆ ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರಿಂದ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಅವರು ಮತದಾನ ಮಹತ್ವ ಕುರಿತು ವಿವರಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸುವ ಬಗ್ಗೆ ಹಾಗೂ ತಿದ್ದುಪಡಿ ಅಗತ್ಯವಿದ್ದಲ್ಲಿ ಅವಕಾಶ ಇರುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಯ್ಯ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸುಜಾತ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಡಿ.ಇ.ಮಲ್ಲಯ್ಯ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

