ಇಂದು ಪ್ರತಿಭಾಶ್ರೀ ಕಾರ್ಯಕ್ರಮ
ತಿಪಟೂರು: ಇಲ್ಲಿನ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪ್ರತಿಭಾಶ್ರೀ, ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೇದಿಕೆ, ಕ್ರೀಡಾ ಚಟುವಟಿಕೆ ಹಾಗೂ ರಾಷ್ಚ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಮಾರಂಪ ಸಮಾರಂಭ ಏರ್ಪಡಿಸಿಲಾಗಿದೆ. ಶನಿವಾರ ಬೆಳಗ್ಗೆ 10.30ಕ್ಕೆ ಕಲ್ಪತರು ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೆವಿಎಸ್ ಅಧ್ಯಕ್ಷ ಎನ್.ಬಸವಯ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರೇಮಗಳೂರು ಕಣ್ಣನ್, ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಪಟು ಎನ್.ನಾರಯಣಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದು ಸಾಂಸ್ಕೃತಿಕ
ಹಬ್ಬ ಸಮಾರೋಪ
ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕ್ರೀಡಾ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕಾಲೇಜು ವಿದ್ಯಾರ್ಥಿಗಳ ಪೋಷಕರ ಸಂಘದ ಕಾರ್ಯಚಟುವಟಿಕೆಗಳ ಸಾಂಸ್ಕೃತಿಕ ಹಬ್ಬದ ಸಮಾರೋಪ ಸಮಾರಂಭ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಗುರುಕುಲಾನಂದಾಶ್ರಮದದ ಇಮ್ಮಡಿಕರಿ ಬಸವದೇಶಿಕೇಂದ್ರ ಸ್ವಾಮೀಜಿ, ಪ್ರಾಂಶುಪಾಲ ಡಾ.ಜಯದೇವಪ್ಪ, ಕಸಾಪ ಜಿಲ್ಲಾಧ್ಯಕ್ಷ ಡಾ.ಸೋ.ಮು.ಭಾಸ್ಕಾರಾಚಾರ್, ಪೋಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಬಿಲ್ಲೆಮನೆ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದು ವಿದ್ಯುತ್ ವ್ಯತ್ಯಯ
ತಿಪಟೂರು: ತಿಪಟೂರು ಉಪವಿಭಾಗದ ವ್ಯಾಪ್ತಿಗೆ ಒಳಪಡುವ ನೊಣವಿನಕೆರೆ ಉಪಸ್ಥಾವರದಿಂದ ವಿದ್ಯುತ್ ಸರಬರಾಜು ಮಾಡುತ್ತಿದ್ದ ಪೀಡರ್ಗಳಿಗೆ ತುರುವೇಕೆರೆ ಉಪವಿಭಾಗದ ತಂಡಗ ಶಾಖೆಯ ವ್ಯಾಪ್ತಿಯಲ್ಲಿ 110 ಕೆ.ವಿ.ಟವರ್ ನಿರ್ಮಿಸುವ ಸಲುವಾಗಿ ಇಂದು ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಮಾರ್ಗ ಮುಕ್ತತೆ ಪಡೆಯುವುದರಿಂದ ವಿದ್ಯುತ್ ಸರಬರಾಜು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರು, ರೈತ ಬಾಂಧವರು ಹಾಗೂ ಸಾರ್ವಜಕರು ಎಂದಿನಂತೆ ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಜೆಪಿಗೆ ನೇಮಕ
ತಿಪಟೂರು: ಕೆಜೆಪಿ ನಗರ ಘಟಕದ ಕಾರ್ಯದರ್ಶಿಯನ್ನಾಗಿ ಹೊಸಪಾಳ್ಯದ ಹೆಚ್.ಎನ್.ಚಂದ್ರಕಾಂತ್ ಅವರನ್ನು ಕೆಜೆಪಿ ಅಭ್ಯರ್ಥಿ ಲೋಕೇಶ್ವರ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

