ತುಮಕೂರು

ಬಾಬು ಜಗಜೀವನರಾಂ ಜನ್ಮದಿನಾಚರಣೆ

Published On :

ಕ.ಪ್ರ. ವಾರ್ತೆ   ಕುಣಿಗಲ್   ಏ.5  
ಚುನಾವಣೆ ನೀತಿ ಸಂಹಿತೆ ಕಾರಣ ಮಾಜಿ ಉಪ ಪ್ರಧಾನಿ ದಿ. ಡಾ.ಬಾಬು ಜಗಜೀವನರಾಮ್ 106ನೇ ಜನ್ಮ ದಿನಾಚರಣೆಯನ್ನು ತಾಲೂಕು ಅಡಳಿತದ ವತಿಯಿಂದ ಇಲ್ಲಿನ ಕಂದಾಯ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ತಹಸೀಲ್ದಾರ್ ಜಗದೀಶ್, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರಾಮಚಂದ್ರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಯಪ್ರಕಾಶ್, ಪಿಎಸೈ ಗುರುಪ್ರಸಾದ್ ಸೇರಿದಂತೆ ಇತರೆ ಅಧಿಕಾರಿಗಳು ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
 ದಲಿತ ಸಮನ್ವಯ ಸಮಿತಿ ರಾಮಚಂದ್ರಯ್ಯ ಬಾಬು ಜಗಜೀವನರಾಮ್ ಸಾಧನೆ ಬಗ್ಗೆ ವಿವರವಾಗಿ ಮಾತನಾಡಿದರು.
ತಹಸೀಲ್ದಾರ್ ಜಗದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಜಾತಿ ಆಧಾರಿತ ವ್ಯವಸ್ಥೆಯನ್ನು ಬಾಬು ಜಗಜೀವನರಾಮ್ ತೀವ್ರವಾಗಿ ಖಂಡಿಸುತ್ತಿದ್ದರು ಎಂದ ಅವರು, ಡಾ.ಬಾಬು ಜಗಜೀವನರಾಮ್ ಕೇವಲ ಒಂದು ವರ್ಗ, ಜಾತಿಗೆ ಸೀಮಿತವಾಗದೆ ಸುಭದ್ರ, ಪ್ರಗತಿಪರ ರಾಷ್ಟ್ರ ನಿರ್ಮಾಣಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡ ದೇಶಭಕ್ತರೂ ಆಗಿದ್ದರು ಎಂದು ಬಣ್ಣಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣಸ್ವಾಮಿ, ಸಿಡಿಪಿಒ ವಿಶ್ವನಾಥ್, ಪುರಸಭೆ ಮುಖ್ಯಾಧಿಕಾರಿ ಶುಭಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.