ಊರುಕೆರೆಯಲ್ಲಿ ಕೆಜೆಪಿ ಸಭೆ ಇಂದು
ತುಮಕೂರು: ಕರ್ನಾಟಕ ಜನತಾಪಕ್ಷದ ತುಮಕೂರು ಗ್ರಾಮಾಂತರ ಘಟಕದ ಕಾರ್ಯಕರ್ತರ ಸಭೆಯನ್ನು ಊರುಕೆರೆಯಲ್ಲಿ ಏ. 7 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೆಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಚಂದ್ರಮೌಳಿ ವಹಿಸಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾಸಭೆಯ ಕೆಜೆಪಿ ಅಭ್ಯರ್ಥಿ ಎಚ್. ನಿಂಗಪ್ಪ ಹಾಗೂ ಜಿಲ್ಲಾಧ್ಯಕ್ಷರಾದ ರವಿ ಹೆಬ್ಬಾಕ ವಹಿಸಲಿದ್ದಾರೆ ಎಂದು ಗ್ರಾಮಾಂತರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ತಿಳಿಸಿದ್ದಾರೆ.
ನೇಣು ಬಿಗಿದುಆತ್ಮಹತ್ಯೆ
ಕುಣಿಗಲ್: ಸಂಸಾರ ಜಂಜಾಟದಿಂದ ಬೇಸತ್ತ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುತ್ರಿದುರ್ಗ ಹೋಬಳಿಯ ಪುರಾಣಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸಂಜೀವನಾಯಕ್ (35) ಎಂದು ಗುರುತಿಸಲಾಗಿದ್ದು, ಈತ ಮೂಲತಹ ಕನಕಪುರ ತಾಲೂಕಿನವನಾಗಿದ್ದು, ಪುರಾಣಿಪಾಳ್ಯದ ಗೋಪಾಲಯ್ಯನವರ ತೋಟದಲ್ಲಿ ಕೆಲಸಕ್ಕಿದ್ದು, ಪತ್ನಿ ಇಬ್ಬರು ಮಕ್ಕಳಿದ್ದಾರೆ. ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಸಂಸಾರ ಜಂಜಾಟದಿಂದ ಬೇಸತ್ತು ನೇಣಿಗೆ ಶರಣಾಗಿದ್ದು, ಮೃತನ ತಂದೆ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

