ತುಮಕೂರು

ಬಾಬು ಜಗಜೀವನ ರಾಂ ಶೋಷಿತ ವರ್ಗಕ್ಕೆ ಸೀಮಿತರಲ್ಲ

Published On :

ಕ.ಪ್ರ.ವಾರ್ತೆ   ಶಿರಾ   ಏ.7
ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನ ರಾಂ ಶೋಷಿತ ವರ್ಗಕ್ಕೆ ಸೀಮಿತವಾಗಿರದೆ ಎಲ್ಲಾ ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಾನ್ ನಾಯಕರಾಗಿದ್ದರು ಎಂದು ಜಾನಪದ ತಜ್ಞ ಪ್ರಾಧ್ಯಾಪಕ ಡಾ.ಚಿಕ್ಕಣ್ಣ ಯೆಣ್ಣೇಕಟ್ಟೆ ತಿಳಿಸಿದರು.
ಅವರು ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಬಾಬು ಜಗಜೀವನ ರಾಂ ಅವರ 106 ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಧ್ವನಿ ಇಲ್ಲದ ಶೋಷಿತ ವರ್ಗದ ಅಭಿವೃದ್ಧಿಗೆ ದುಡಿದಂತಹ ಮಹಾನ್ ಚೇತನರಾಗಿದ್ದ ಬಾಬು ಜಗಜೀವನ ರಾಂ ಸಮಾಜದ ಎಲ್ಲಾ ಜನರ ಅಭಿವೃದ್ಧಿಯ ಹರಿಕಾರರಾಗಿದ್ದರು. ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ದೇಶದಲ್ಲಿ ಹಸಿರು ಕ್ರಾಂತಿಯನ್ನು ಜಾರಿಗೆ ತರುವ ಮೂಲಕ ಬಡವರ ಪಾಲಿಗೆ ದಿವ್ಯ ಚೇತನರಾಗಿದ್ದರು ಎಂದರು.  ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕಾಂತರಾಜು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವೇದಮೂರ್ತಿ, ನಗರಸಭೆ ಆಯುಕ್ತ ಬಿ.ಟಿ.ರಂಗಸ್ವಾಮಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.