ಮರಳು ಮಾಫಿಯಾಗೆ ಶಾಸಕರ ಕುಮ್ಮಕ್ಕು
ಕ.ಪ್ರ.ವಾರ್ತೆ ಶಿರಾ ಏ.7
ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಮಾಫಿಯಾಗೆ ಶಾಸಕರ ಕುಮ್ಮಕ್ಕೆ ಕಾರಣ, ಅಭಿವೃದ್ಧಿ ಹೆಸರಲ್ಲಿ ಕೋಟ್ಯಂತರ ರು. ಮೌಲ್ಯದ ಮರಳನ್ನು ಬೆಂಗಳೂರಿಗೆ ಸಾಗಿಸಿದ್ದೇ ಶಾಸಕರ ಸಾಧನೆ ಎಂದು
ಟಿ.ಬಿ.ಜಯಚಂದ್ರ ಅವರನ್ನು ಮಾಜಿ ಸಚಿವ ಬಿ.ಸತ್ಯನಾರಾಯಣ ಟೀಕಿಸಿದರು. ಅವರು ತಾಲೂಕಿನ ತಾವರೆಕೆರೆಯಲ್ಲಿ ಆಯೋಜಿಸಿದ್ದ ಗೌಡರೆಗೆ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕುಡಿಯುವ ನೀರಿಗೆ ಗ್ರಾಮಾಂತರ ಪ್ರದೇಶದ ಜನತೆ ಪರದಾಡುತ್ತಿದ್ದಾರೆ. ಆದರೆ ಇವರು ಅಭಿವೃದ್ಧಿ ಕಾಮಗಾರಿಗಳಿಗೆ 850 ಕೋಟಿ ರು.ಗಳಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ತಂದಿದ್ದೇನೆ ಎಂದು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದರು.
ಬರದ ಬೇಗೆಯಲ್ಲಿ ನರಳುತ್ತಿರುವ ರೈತ ವಿದ್ಯುತ್ ಕೊರತೆಯಿಂದ ಕೈಗೆ ಬಂದ ಅಡಿಕೆ, ತೆಂಗು, ವಿವಿಧ ಬೆಳೆಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದು, ಸರ್ಕಾರ ವಿದ್ಯುತ್ ನೀಡಲು ಸಾಧ್ಯವಾಗಿಲ್ಲ. ವಿದ್ಯುತ್ಗಾಗಿ ಬೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸುವ ಸೌಜನ್ಯವನ್ನೂ ತೊರದೆ ಶಾಸಕರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುವುದನ್ನು ಅರ್ಥ ಮಾಡಿಕೊಂಡು ಜೆಡಿಎಸ್ಗೆ ಮತ ನೀಡಬೇಕು ಎಂದರು.
ವಿಫಲ: ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಮಾತನಾಡಿ ರಾಷ್ಟ್ರೀಯ ಪಕ್ಷಗಳು ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿವೆ. 20 ತಿಂಗಳ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಆಡಳಿತದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್, ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಜನಪ್ರಿಯ ಯೋಜನೆಗಳು ಜನ ಮಚ್ಚುಗೆಗೆ ಪಾತ್ರವಾಗಿವೆ. ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದರು.
ಸಮಾವೇಶದಲ್ಲಿ ಬೇವಿನಹಳ್ಳಿ, ಹುಣಸೇಹಳ್ಳಿ, ಗೌಡಗೆರೆ, ತಾವರೆಕೆರೆ ಗ್ರಾ.ಪಂ. ವ್ಯಾಪ್ತಿಯ ನೂರಾರು ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ಗೆ ಸೇರ್ಪಡೆಗೊಂಡರು. ಜಿ.ಪಂ. ಸದಸ್ಯ ಬಿ.ಕೆ.ಬಡೀರಣ್ಣ, ಸಿ.ಆರ್.ಉಮೇಶ್, ವಿಶಾಲಾಕ್ಷಿ ಪ್ರಕಾಶ ಗೌಡ, ಕೃಷ್ಣಮೂರ್ತಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಗಡಾರಿ ಹನುಮಂತಪ್ಪ, ನಗರಸಭಾ ಮಾಜಿ ಅಧ್ಯಕ್ಷ ಟಿ.ರಘು, ಹಾಲಿ ಸದಸ್ಯರಾದ ಉಗ್ರೇಶ್, ದೇವರಾಜು, ತಾ.ಪಂ.
ಸದಸ್ಯ ಸತ್ಯಪ್ರಕಾಶ್, ವಿನಯ್, ಮುರುಗಪ್ಪಗೌಡ, ಪ್ರಕಾಶ ಗೌಡ, ಮುದಿಮಡು ರಂಗಶಾಮಯ್ಯ, ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ, ಎಸ್.ಆರ್.ಗೌಡ, ಬಾಂಬೆ ರಾಜಣ್ಣ, ಗ್ರಾ.ಪಂ. ಅಧ್ಯಕ್ಷೆ ಗಿರಿಜಮ್ಮ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

