ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ನರಸೇಗೌಡ
ಕ.ಪ್ರ.ವಾರ್ತೆ ಗುಬ್ಬಿ ಏ.7
ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸುವ ಭರವಸೆ ನೀಡಿ ಮೊದಲ ಪಟ್ಟಿಯಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬೀರಮಾರನಹಳ್ಳಿ ನರಸೇಗೌಡ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ಅಧಿಕೃತ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ತಾಲೂಕಿನ ಕಾಂಗ್ರೆಸ್ ಪಕ್ಷದ ಗುಬ್ಬಿ ಮತ್ತು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ನನ್ನ ಪರವಾಗಿ ಬೆಂಬಲ ಸೂಚಿಸಿದ್ದರೂ ಸಹ ನನ್ನನ್ನು ಪರಿಗಣಿಸದೆ ಬೇರೆಯವರಿಗೆ ಟಿಕೆಟ್ ನೀಡುವುದಾಗಿ ಮೊದಲ ಪಟ್ಟಿಯಲ್ಲಿ ಪ್ರಕಟಿಸಿರುವುದು ಖಂಡನೀಯ. ಪಕ್ಷ ಟಿಕೆಟ್ ನೀಡದಿದ್ದ ಪಕ್ಷದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

