ತುಮಕೂರು

ಜೆಡಿಎಸ್ ಬಲವರ್ಧನೆಗೆ ನಾಗರಾಜಯ್ಯ ಪ್ರವಾಸ

Published On :

ಕ.ಪ್ರ.ವಾರ್ತೆ   ಕುಣಿಗಲ್   ಏ.8
ಕುಣಿಗಲ್ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಎಂಬ ಉತ್ತರ ಇನ್ನೂ ಸ್ಪಷ್ಟವಾಗದಿದ್ದರೂ, ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಿ.ನಾಗರಾಜಯ್ಯ ಸೋಮವಾರ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಅಮೃತೂರು ಹೋಬಳಿಯ 23 ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡರು.
ಬೆಟ್ಟಹಳ್ಳಿಯಲ್ಲಿ ಈ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಶೇಖರ್, ವೆಂಕಟೇಶ್, ಕಾಂಗ್ರೆಸ್ನಲ್ಲಿದ್ದ ನರಸಿಂಹಯ್ಯ ಇತರರು ಮಾಜಿ ಸಚಿವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವರು, ಅಲ್ಪಾವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಕುಮಾರಸ್ವಾಮಿ ನೀಡಿರುವ ಹಲವು ಜನಪರ ಕಾರ್ಯಕ್ರಮಗಳು ಶಾಶ್ವತವಾಗಿ ಜನತೆಯ ಮನದಲ್ಲಿ ಛಾಪು ಮೂಡಿಸಿವೆ. ರಾಜ್ಯದ ಸಮಗ್ರ ಅಭಿವೃದ್ಧಿ ಜೆಡಿಎಸ್ನಿಂದ ಮಾತ್ರ ಸಾಧ್ಯ. ರಾಜ್ಯವನ್ನಾಳಿದ ಇತರ ಯಾವ ಪಕ್ಷಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡಿಲ್ಲ.  ಮತ್ತೊಂದು ಅವಧಿಗೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ದಿಸೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದರು.
ಅಮೃತೂರು ಜಿಪಂ ಸದಸ್ಯ ಡಾ. ಬಿ.ಎನ್.ರವಿ, ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್, ಮುಖಂಡರಾದ ಭೈರಪ್ಪ, ಸುರೇಶ್, ಶೇಷ, ನರಸಿಂಹಯ್ಯ, ರಮೇಶ್, ನಾಗರಾಜ್, ಕೃಷ್ಣಪ್ಪ, ರಂಗಸ್ವಾಮಿ, ತಾಪಂ ಸದಸ್ಯ ಜಗದೀಶ್ ಇತರರಿದ್ದರು. ಅಮೃತೂರು ಹೋಬಳಿ ವ್ಯಾಪ್ತಿಯಲ್ಲಿ ನಾಗರಾಜಯ್ಯ ಮಂಗಳವಾರವೂ ಪ್ರವಾಸ ಕೈಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.