'ವಿದ್ಯಾರ್ಥಿಗಳು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು'
ಕ.ಪ್ರ.ವಾರ್ತೆ ತಿಪಟೂರು ಏ.9
ದೇಶದ ಸರ್ವತೋಮುಖ ಅಭಿವೃದ್ಧಿಗೆ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದ್ದು, ಶ್ರದ್ಧೆ, ಶಿಸ್ತು ಮತ್ತು ಸ್ಪರ್ಧಾತ್ಮಕತೆಯಿಂದ ವಿದ್ಯಾಭ್ಯಾಸ ಮಾಡುವ ಮೂಲಕ ತಮ್ಮ ಗುರಿ ಮುಟ್ಟಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಅರಸೀಕೆರೆ ತೋಟಗಾರಿಕಾ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಟಿ.ಬಿ. ಬಸವರಾಜು ತಿಳಿಸಿದರು. ನಗರದ ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಶ್ರೀ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಹಾಗೂ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಸುಜಿತ್ ಮಾತನಾಡಿ ಕುಂಬಾರನು ಹೇಗೆ ಮಣ್ಣನ್ನು ಹದಮಾಡಿ ಮಡಕೆ ಮಾಡುವನೋ ಹಾಗೆ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿ ಅವರ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕೆಂದರು.
ಅಧ್ಯಕ್ಷತೆಯನ್ನು ಕೆ.ವಿ.ಎಸ್ ಅಧ್ಯಕ್ಷ ಎನ್. ಬಸವಯ್ಯ ವಹಿಸಿ, ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಕಾಲೇಜಿನ ವರದಿಯನ್ನು ಪ್ರಾಂಶುಪಾಲ ಎನ್.ಪರಮೇಶ್ವರಪ್ಪ, ಕ್ರೀಡಾ ವರದಿಯನ್ನು ದೈಹಿಕ ನಿರ್ದೇಶಕ ಪಿ. ಗೋವಿಂದರಾಜು ಓದಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

