ತುಮಕೂರು

ನಗರದಲ್ಲೆ ಕೆಜೆಪಿ ಪರ ಅಲೆ ಸೃಷ್ಟಿ

Published On :

ಕ.ಪ್ರಭ. ವಾರ್ತೆ   ತುಮಕೂರು   ಏ.9
ನಗರದಲ್ಲೆ ಕೆಜೆಪಿ ಪರ ಅಲೆ ಸೃಷ್ಟಿಯಾಗಿದೆ. ಇದನ್ನು ಮತಗಳಾಗಿ ಪರಿವರ್ತಿಸಲು ಕಾರ್ಯಕರ್ತರು ಮನೆ ಮನೆಗೆ ತೆರಳಿ ಶಾಸಕರ 19 ವರ್ಷದ ದುರಾಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿ ಎಂದು ಕಾರ್ಯಕರ್ತರಿಗೆ ಕೆಜೆಪಿ ಅಭ್ಯರ್ಥಿ  ಜಿ.ಬಿ. ಜ್ಯೋತಿ ಗಣೇಶ್ ಕರೆ ನೀಡಿದರು.
ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಸದಾಶಿವಯ್ಯ ವಿಶಾಲಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕೆಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ನಗರದ ಜನತೆ ಆಡಳಿತದಲ್ಲಿ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಜನತಾ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಮೂವತೈದು ವಾರ್ಡ್ಗಳಲ್ಲಿಯೂ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಬುಧವಾರದಿಂದ ಪ್ರಚಾರ ತೀವ್ರಗೊಳಿಸಿ ಎಂದರು.
ಅರಿವು ಮೂಡಿಸಿ: ಕಾರ್ಯಕರ್ತರಲ್ಲಿ ವೈಮನಸ್ಸುಗಳಿದ್ದರೆ ಮರೆತು ಚುನಾವಣೆಯಲ್ಲಿ ಗೆಲವು ಪಡೆಯಲು ಶ್ರಮವಹಿಸಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಪಕ್ಷದ ಪರವಾಗಿ ಪ್ರಚಾರ ನಡೆಸಿ ಪಕ್ಷದ ಚಿಹ್ನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಎಚ್. ನಿಂಗಪ್ಪ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಉಳಿಗಾಲವಿಲ್ಲ. ವಚನಭ್ರಷ್ಟ ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದೆ. ಜೆಡಿಎಸ್ ಅವ್ಯವಹಾರಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗ ಪಡಿಸುತ್ತೇನೆ ಎಂದರು.
ತುಮಕೂರು ಜನರನ್ನು ಪ್ರತಿನಿಧಿಸಲು ಸಮರ್ಥರಾಗಿರುವ ವಿದ್ಯಾವಂತ, ಪ್ರಾಮಾಣಿಕ ಜ್ಯೋತಿಗಣೇಶ್ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯಗಳಿವೆ. ಅದನ್ನು ಮತಗಳಾಗಿ ಪರಿವರ್ತಿಸಲು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಬಿಎಸ್ವೈ ಬೆಂಬಲಿಸಿ: ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ಅಭಿವೃದ್ಧಿಪರ ಚಿಂತನೆಯ ಬಿ.ಎಸ್.ಯಡಿಯೂರಪ್ಪನವರನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂದರು.
ಸಭೆಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಕೆಜೆಪಿಗೆ ಸೇರ್ಪಡೆಯಾದರು. ಸಭೆಯಲ್ಲಿ ತುಮಕೂರು ನಗರ ಘಟಕದ ಅಧ್ಯಕ್ಷ ಕೊಪ್ಪಲ್ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಶಯ್ಯ, ಎಚ್.ಜಿ. ಬಸವರಾಜ್, ಅಫ್ರೊಜ್, ವಿಷ್ಣುವರ್ಧನ, ಹನುಮಂತರಾಜ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.