ಮತದಾರರ ಹೆಸರು ನಾಪತ್ತೆ: ಆಕ್ರೋಶ
ಕ.ಪ್ರಭ. ವಾರ್ತೆ ತುಮಕೂರು ಏ.10
ಈ ಹಿಂದೆ ಸುಮಾರು 4 ಬಾರಿ ವಿಧಾನಸಭಾ, ಲೋಕಸಭಾ ಮತ್ತು ತುಮಕೂರು ನಗರಸಭೆ ಚುನಾವಣೆಗಳಲ್ಲಿ ಅಲ್ಪಸಂಖ್ಯಾತರ ಹಾಗೂ ಹಿಂದುಳಿದವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿ ಇದನ್ನು ಸರಿಪಡಿಸಲು ಯುವ ಕಾಂಗ್ರೆಸ್ ಮನವಿ ಮಾಡಿದ್ದಾರೆ.
ಮತದಾರರ ಪಟ್ಟಿಯಿಂದ ಹೆಸರನ್ನು ಬಿಟ್ಟಿರುವುದರಿಂದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು. ಈಗಾಗಲೇ ಚುನಾವಣೆ ಸಮಿತಿ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವ ಕಾರ್ಯ ಶ್ಲಾಘನೀಯ ಎಂದಿದ್ದಾರೆ.
ಆದರೆ ಚುನಾವಣೆಗೆ ಕೆಲವೇ ದಿನಗಳ ಕಾಲಾವಕಾಶ ಇರುವುದರಿಂದ ಮತದಾರರ ಪಟ್ಟಿಯಲ್ಲಿರುವ ಹೆಸರನ್ನು ಈ ತಕ್ಷಣಕ್ಕೆ ಕೈ ಬಿಡುವ ಪ್ರಯತ್ನವನ್ನು ಮುಂದಕ್ಕೆ ಹಾಕಬೇಕೆಂದು ಮನವಿ ಮಾಡಿದರು.
ತುಮಕೂರು ನಗರದಲ್ಲಿ 35 ವಾರ್ಡ್ಗಳಿದ್ದು ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮತದಾರರು ಇರುವುದರಿಂದ ಕಾಂಗ್ರೆಸ್ ಮತದಾರರನ್ನು ಮುಖ್ಯವಾಗಿ ಆಡಳಿತರೂಢ ಪಕ್ಷದವರು ಗಮನದಲ್ಲಿಟ್ಟುಕೊಂಡು ಮೂಲ ಕಾಂಗ್ರೆಸ್ ಮತದಾರರನ್ನು ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ವಜಾಗೊಳಿಸಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಟಿ. ರಾಜೇಶ್ ದೂರಿದ್ದಾರೆ.
ಇದರಿಂದ ಕಾಂಗ್ರೆಸ್ ಪ್ರಾಬಲ್ಯವಿರುವ ವಾರ್ಡ್ಗಳಲ್ಲಿ ಮತದಾರರನ್ನು ದಿಕ್ಕು ತಪ್ಪಿಸುವುದರ ಮೂಲಕ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಅಕ್ರಮವಾಗಿ ತೆಗೆಯುವದರ ಮೂಲಕ ದ್ರೋಹ ಎಸಗಲಾಗಿದೆ. ಈ ಹಿಂದೆಯೂ ಜಿಲ್ಲೆಯಲ್ಲಿ 40 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಆಡಳಿತ ರೂಢ ಪಕ್ಷ ಪ್ರಾಬಲ್ಯ ಮೆರೆದು ಚುನಾವಣಾ ಪಟ್ಟಿಯಲ್ಲಿ ಅಕ್ರಮವೆಸಗಿ ಕಾಂಗ್ರೆಸ್ ಸೋಲಿಗೆ ಕಾರಣರಾಗಿದ್ದಾರೆ.
ಈ ಕೂಡಲೇ ಜಿಲ್ಲಾಡಳಿತ ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವಂತಹ ಮತದಾರರ ಹೆಸರನ್ನು ಸೇರಿಸಿ ಈ ಹಿಂದೆ ನಡೆದಂತಹ ಅಕ್ರಮಗಳು ಮತ್ತೆ ಮರುಕಳಿಸದಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರ ಪಟ್ಟಿಯಿಂದ ಹೆಸರು ವಜಾಗೊಳಿಸುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮುಖಂಡರಾದ ಮುಬಾರಕ್, ಪ್ರಸನ್ನಕುಮಾರ್, ದಿವಾಕರ್, ವಕೀಲ ಪಾತಣ್ಣ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

