ತುಮಕೂರು

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

Published On :

ಮಂಡ್ಯ: ಅಬಕಾರಿ ಉಪ ಆಯುಕ್ತ ಎಚ್.ಎನ್. ಆನಂದ್ ಅವರ ನಿರ್ದೇಶನದ ಮೇರೆಗೆ ಮಂಡ್ಯ ಅಬಕಾರಿ ಉಪ ಅಧೀಕ್ಷಕರು ಏ.10ರಂದು ತಾಲೂಕಿನ ಶ್ರೀನಿವಾಸಪುರದ ಎಸ್.ಡಿ.ಜಯರಾಂ ಕಾಲೋನಿಯಲ್ಲಿ ಶ್ರೀನಿವಾಸ್  ಅವರ ಮನೆಯಲ್ಲಿ ದಾಳಿ ನಡೆಸಿ 8.100 ಲೀಟರ್ ಮದ್ಯ ಹಾಗೂ 1.320 ಲೀಟರ್ ಬಿಯರ್ ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಡ್ಯ ವಲಯ ಅಬಕಾರಿ ನಿರೀಕ್ಷಕರು ತಾಲೂಕಿನ ಹೊಸ ಬೂದನೂರು ಗ್ರಾಮದ ಚನ್ನಪ್ಪ ಎಂಬವರಿಗೆ ಸೇರಿದ ಪೆಟ್ಟಿಗೆ ಅಂಗಡಿಯನ್ನು ದಾಳಿ ಮಾಡಿ 1.260 ಲೀಟರ್ ಮದ್ಯ ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಿದ್ದಾರೆ.  ಬಸರಾಳು ಹೋಬಳಿಯ ಕೋಡಿಕೊಪ್ಪಲು ಗ್ರಾಮದ ಕೇಶವ ಎಂಬುವರಿಗೆ ಸೇರಿದ ಪೆಟ್ಟಿಗೆ ಅಂಗಡಿಯನ್ನು ದಾಳಿ ಮಾಡಿ 1.800 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.