ಡಮ್ಮಿ ಅಭ್ಯರ್ಥಿ ಕಾನೂನು ಬಾಹಿರ
ಕ.ಪ್ರ. ವಾರ್ತೆ , ತುಮಕೂರು , ಏ.12
ವಿಧಾನಸಭಾ ಚುನಾವಣೆಗೆ ಅಧಿಕ ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದ್ದು, ಯಾವುದೇ ಪಕ್ಷೇತರ ಅಭ್ಯರ್ಥಿಯು ಮತ್ತೊಬ್ಬ ಅಭ್ಯರ್ಥಿಯ ಡಮ್ಮಿ ಅಭ್ಯರ್ಥಿಯಾಗುವುದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅನ್ವಯ ಕಾನೂನು ಬಾಹಿರ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಎಚ್ಚರಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಈ ರೀತಿ ಒಬ್ಬ ಅಭ್ಯರ್ಥಿಯು ಮತ್ತೊಬ್ಬ ಅಭ್ಯರ್ಥಿ ಪರವಾಗಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಚುನಾವಣಾ ಸಮಯದಲ್ಲಿ ಮತಯಾಚಿಸಿದರೆ ಅಂತಹ ಡಮ್ಮಿ ಅಭ್ಯರ್ಥಿ ಖರ್ಚನ್ನು ಮೂಲ ಅಭ್ಯರ್ಥಿಗೆ ಸೇರಿಸಲಾಗುವುದು ಹಾಗೂ ಸಾರ್ವಜನಿಕರು ಇಂತಹ ಚುನಾವಣಾ ಅಕ್ರಮ ಕಂಡು ಬಂದಲ್ಲಿ ಹತ್ತಿರದ ತಹಸೀಲ್ದಾರ್, ಪೊಲೀಸ್ ಅಧಿಕಾರಿ, ಕಂಟ್ರೋಲ್ ರೂಂ ಅಥವಾ ಚುನಾವಣೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣಾ ಸಂಬಂಧಿತ ಚಟುವಟಿಕೆಗಳ ಬಗ್ಗೆ ನಿಗಾ ಇಡಲಾಗುವುದು ಮತ್ತು ವಿಡಿಯೋಗ್ರಫಿ ಕೂಡ ಮಾಡಲಾಗುವುದು. ಈ ಸಂದರ್ಭದಲ್ಲಿ ಡಮ್ಮಿ ಅಭ್ಯರ್ಥಿ ಹೆಸರಿನಲ್ಲಿ ಪರವಾನಗಿ ಪಡೆದ ವಾಹನಗಳನ್ನು ಬೇರೆ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಬಳಸಿದಲ್ಲಿ, ಡಮ್ಮಿ ಅಭ್ಯರ್ಥಿಯ ಮತಗಟ್ಟೆ ಏಜೆಂಟ್, ಎಣಿಕೆ ಏಜೆಂಟ್ ಬೇರ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸಿದ್ದು, ಕಂಡು ಬಂದಲ್ಲಿ ಇದು ಚುನಾವಣಾ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕ್ರಿಮಿನಲ್ ಮೊಕದ್ದಮೆ: ಡಮ್ಮಿ ಅಭ್ಯರ್ಥಿ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 171 ಎಚ್ ಅನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಯಾವುದೇ ಚುನಾವಣಾ ಅಕ್ರಮ ಅಥವಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಯಂತ್ರಣ ಕೊಠಡಿ ಸ್ಥಾಪನೆ:ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ಅಬಕಾರಿ ಇಲಾಖೆಯಿಂದ ಅಬಕಾರಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಯಾವುದೇ ಅಕ್ರಮ ಮದ್ಯಸಂಗ್ರಹಣೆ, ಸಾಗಾಣಿಕೆ, ಮಾರಾಟದಂತಹ ಅಕ್ರಮ ಕಂಡು ಬಂದಲ್ಲಿ ಸಾರ್ವಜನಿಕರು ಈ ಕೆಳಕಂಡ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ನೀಡಬಹುದು.
ಅಬಕಾರಿ ನಿರೀಕ್ಷಕರ ಕಚೇರಿ, ತುಮಕೂರು ವಲಯ, ತುಮಕೂರು ದೂ.ವಾ.0816-2252205, ಅಬಕಾರಿ ನಿರೀಕ್ಷಕರ ಕಚೇರಿ, ಗುಬ್ಬಿ ವಲಯ, ಗುಬ್ಬಿ ದೂ.ವಾ.08131-222949, ಅಬಕಾರಿ ನಿರೀಕ್ಷಕರ ಕಚೇರಿ, ಕುಣಿಗಲ್ ವಲಯ, ಕುಣಿಗಲ್ ದೂ.ವಾ.08132-222544, ಅಬಕಾರಿ ನಿರೀಕ್ಷಕರ ಕಚೇರಿ,ತಿಪಟೂರು ವಲಯ, ತಿಪಟೂರು ದೂ.ವಾ.08134-254574, ಅಬಕಾರಿ ನಿರೀಕ್ಷಕರ ಕಚೇರಿ, ತುರುವೇಕೆರೆ, ವಲಯ, ತುರುವೇಕೆರೆ ದೂ.ವಾ.08139-288483, ಅಬಕಾರಿ ನಿರೀಕ್ಷಕರ ಕಚೇರಿ, ಚಿ.ನಾ.ಹಳ್ಳಿ ವಲಯ, ಚಿ.ನಾ.ಹಳ್ಳಿ ದೂ.ವಾ.08133-267010, ಅಬಕಾರಿ ನಿರೀಕ್ಷಕರ ಕಚೇರಿ, ಶಿರಾ ವಲಯ, ಶಿರಾ ದೂ.ವಾ.08135-277198, ಅಬಕಾರಿ ನಿರೀಕ್ಷಕರ ಕಚೇರಿ, ಕೊರಟಗೆರೆ ವಲಯ, ಕೊರಟಗೆರೆ ದೂ.ವಾ.08138-233262, ಅಬಕಾರಿ ನಿರೀಕ್ಷಕರ ಕಚೇರಿ, ಮಧುಗಿರಿ ವಲಯ, ಮಧುಗಿರಿ ದೂ.ವಾ.08137-283655, ಅಬಕಾರಿ ನಿರೀಕ್ಷಕರ ಕಚೇರಿ, ಪಾವಗಡ ದೂ.ವಾ.08136-245572, ಅಬಕಾರಿ ಉಪ ಅಧೀಕ್ಷಕರ ಕಚೇರಿ, ತುಮಕೂರು ಉಪವಿಭಾಗ, ತುಮಕೂರು ದೂ.ವಾ.0816-225 2251307, ಅಬಕಾರಿ ಉಪ ಅಧೀಕ್ಷಕರ ಕಚೇರಿ, ಮಧುಗಿರಿ ಉಪವಿಭಾಗ, ಮಧುಗಿರಿ ದೂ.ವಾ.08137-284366, ಅಬಕಾರಿ ಉಪ ಅಧೀಕ್ಷಕರ ಕಚೇರಿ,ತಿಪಟೂರು ಉಪವಿಭಾಗ, ತಿಪಟೂರು ದೂ.ವಾ.08134-250504, ಅಬಕಾರಿ ಉಪ ಆಯುಕ್ತರ ಕಚೇರಿ, ತುಮಕೂರು ಜಿಲ್ಲೆ, ತುಮಕೂರು 0816-2272927 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

