ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ: ಸತ್ಯನಾರಾಯಣ
ಶಿರಾ: ಈ ಹಿಂದೆ ಶಾಸಕ, ಸಚಿವನಾಗಿದ್ದಾಗ ಶಿರಾ ಕ್ಷೇತ್ರಕ್ಕೆ ಅನೇಕ ಸರ್ಕಾರಿ ಆಸ್ಪತ್ರೆಗಳು ಶಾಲಾ ಕಟ್ಟಡ, ರಸ್ತೆ ಕಾಮಗಾರಿ, ಅಂಬೇಡ್ಕರ್ ಭವನ ನಿರ್ಮಾಣ, ಶಿರಾ ಅಮರಾಪುರ ರಸ್ತೆ ಅಭಿವೃದ್ಧಿ, ಗುಳಿಗೇನಹಳ್ಳಿ, ಬೇವಿನಹಳ್ಳಿಗಳಲ್ಲಿ ವಿದ್ಯುತ್ ಉಪಸ್ಥಾವರ ಸೇರಿದಂತೆ ಕೋಟ್ಯಂತರ ರು.ಗಳ ಅಭಿವೃದ್ಧಿ ಕಾರ್ಯಗಳನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಅಭಿವೃದ್ಧಿ ಕಾರ್ಯಗಳ ಫಲವಾಗಿ ನನಗೆ ಮತ ನೀಡಿ ಎಂದು ಮಾಜಿ ಸಚಿವ ಬಿ.ಸತ್ಯನಾರಾಯಣ ಮತದಾರರಲ್ಲಿ ಮನವಿ ಮಾಡಿದರು.
ಅವರು ತಾಲೂಕಿನ ಗುಳೀಗೆನಹಳ್ಳಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಕಳ್ಳಂಬೆಳ್ಳ ಹೋಬಳಿಯ ಚಿಕ್ಕದಾಸರಹಳ್ಳಿ ಗ್ರಾಮದಲ್ಲಿ ನಡೆದ ಕಾಂಗೈ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ಮಾತಿನ ವರಸೆಯನ್ನೇ ಬದಲಾಯಿಸಿದ್ದಾರೆ ಎಂದರು.
ಜಿ.ಪಂ. ಸದಸ್ಯ ಬಿ.ಕೆ.ಬಡೀರಣ್ಣ ಮಾತನಾಡಿ ಭೂತಪ್ಪನ ಗುಡಿಯ ಬಳಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷರು ಇಡೀ ಯಾದವ ಸಮಾಜದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಯಾದವ ಜನಾಂಗದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಮುಖಂಡರಿಗೆ ಇಲ್ಲ ಎಂದರು.
ಸಾ.ಲಿಂಗಯ್ಯ ಜೆಡಿಎಸ್ಗೆ ಸೇರ್ಪಡೆ: ಹಿರಿಯ ಕಾಂಗ್ರೆಸ್ ಧುರೀಣ ಮಾಜಿ ಶಾಸಕ ಸಾ.ಲಿಂಗಯ್ಯ ಅವರು ಅಧಿಕೃತವಾಗಿ ಜೆಡಿಎಸ್ಗೆ ಸೇರ್ಪಡೆಯಾದರು.
ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ, ಪುರಸಭೆಯ ಮಾಜಿ ಅಧ್ಯಕ್ಷ ಮುರುಗಪ್ಪಗೌಡ, ಮಖಂಡ ಎಂ.ಚಿದಾನಂದ್, ಕಲ್ಕೆರೆ ರವಿಕುಮಾರ್, ಟಿ.ರಘು, ನಗರಸಭೆ ಸದಸ್ಯರಾದ ಆರ್.ಉಗ್ರೇಶ್, ಜಿ.ಪಂ. ಸದಸ್ಯ ಕೃಷ್ಣಮೂರ್ತಿ, ಮುದಿಮಡು ರಂಗಶಾಮಯ್ಯ, ಬಾಂಬೆ ರಾಜಣ್ಣ, ಅರೆಹಳ್ಳಿ ಬಾಬು, ಎಸ್.ಆರ್.ಗೌಡ, ಆರ್.ಮಧುಸೂಧನ್, ತಿಪ್ಪೇಸ್ವಾಮಿ, ಆರ್.ರಾಘವೇಂದ್ರ, ಬಂಡೆರಾಮಕೃಷ್ಣ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

