ತುಮಕೂರು

ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ನಾಮಪತ್ರ ಸಲ್ಲಿಕೆ

Published On :

ಮಧುಗಿರಿ: ಮಧುಗಿರಿ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಇತಿಹಾಸ ಪ್ರಸಿದ್ಧ ಶ್ರೀ ದಂಡಿನಮಾರಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ  ಅಪಾರ ಬೆಂಬಲಿಗರೊಟ್ಟಿಗೆ ಮಧುಗಿರಿ  ಪಟ್ಟಣದ ಪ್ರಮುಖ ಬೀದಿಗಳಲ್ಲಿ  ಅದ್ಧೂರಿ ಮೆರವಣಿಗೆ ಹೊರಟು ಚುನಾವಣಾಧಿಕಾರಿ ಸಿ.ಅನಿತಾ ಅವರಿಗೆ ನಾಮಪತ್ರ ಸಲ್ಲಿಸಿದರು. ಕೆ.ಎನ್.ರಾಜಣ್ಣ ಸುದ್ದಿಗಾರರ ಜತೆ ಮಾತನಾಡಿ,ಈ ಕ್ಷೇತ್ರದಲ್ಲಿ ನಾನು ಎರಡು ಸಲ ಸೋತರೂ ಕೂಡ ದೃತಿಗೆಡದೆ ಸೋಲು-ಗೆಲವನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಕೆಲಸ ಮಾಡಿರುವ ತೃಪ್ತಿ ನನಗಿದೆ. ಆ ನಿಟ್ಟಿನಲ್ಲಿ  ಇಲ್ಲಿಗೆ ಈಗ ಸ್ವಯಂಪ್ರೇರಿತರಾಗಿ ಆಗಮಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿ ಮತದಾರರ  ಜನಸ್ತೋಮವೇ ಸಾಕ್ಷಿಯಾಗಿದ್ದು ಈ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲವು ಖಚಿತ  ಎಂದರು.  ಪಟ್ಟಣದ ಮೆರವಣಿಗೆ ಉದ್ದಕ್ಕೂ ಕಾಂಗ್ರೆಸ್ ಮುಖಂಡರು,ಕಾರ್ಯರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಕಾಂಗ್ರೆಸ್ ಹಾಗೂ ಅಭ್ಯರ್ಥಿ ರಾಜಣ್ಣ ಅವರ ಪರವಾಗಿ ಜಯ ಘೋಷ ಮುಗಿಲು ಮುಟ್ಟಿದವು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.