ತುಮಕೂರು

ಪಕ್ಷ ನಿಷ್ಠೆಗೆ ಸಂದ ಗೌರವ: ನಾಗರಾಜಯ್ಯ

Published On :

ಕ.ಪ್ರ. ವಾರ್ತೆ  ಕುಣಿಗಲ್  ಏ.17
ತಾಲೂಕಿನಲ್ಲಿ ಕಳೆದ ನಲವತ್ತು ವರ್ಷಗಳಿಂದ ಜೆಡಿಎಸ್ ಕಟ್ಟಿ, ಬೆಳೆಸಲು ತಾವು ನೀಡಿದ ಕೊಡುಗೆ, ಪಕ್ಷದ ವರಿಷ್ಠರಾದ ದೇವೇಗೌಡರೊಂದಿಗೆ ತಮ್ಮ ನಿಕಟ ಸಂಬಂಧ ಮತ್ತು  ನಿಷ್ಠಾವಂತ ಕಾರ್ಯಕರ್ತನಾಗಿ ತಾವು ಸಲ್ಲಿಸಿದ ಸೇವೆಯ ಫಲವಾಗಿ ಬುಧವಾರ ತಮಗೆ ಪಕ್ಷ ಸಿ ಫಾರಂ ನೀಡಿ ಅಧಿಕೃತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.
ಬುಧವಾರ ಮಧ್ಯಾಹ್ನ, ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಸೋಮವಾರದಂದು ಮಾಜಿ ಶಾಸಕ ಎಸ್.ಪಿ.ಮುದ್ದಹನುಮೇಗೌಡರಿಗೆ ಬಿ ಫಾರಂ ನೀಡಲಾಗಿತ್ತು. ಆದರೆ, ಕಳೆದ ನಾಲ್ಕು ದಶಕಗಳಿಂದ ತಾವು ಪಕ್ಷಕ್ಕೆ ನೀಡಿರುವ ಸೇವೆ, ಪಕ್ಷದ ಏಳಿಗೆಗೆ ಸಲ್ಲಿಸಿರುವ ಸೇವೆ ಗಮನಿಸಿ, ಪಕ್ಷದ ವರಿಷ್ಠರು ತಮ್ಮನ್ನು ಆಯ್ಕೆ ಮಾಡಿದ್ದಾರೆ. ಇದಕ್ಕಾಗಿ ಪಕ್ಷದ ವರಿಷ್ಠರೂ, ತಾಲೂಕಿನವರೇ ಆದ ಜಮೀರ್ ಅಹಮದ್ ಅವರ ಕೊಡುಗೆಯೂ ಸಾಕಷ್ಟಿದೆ ಎಂದರು.
   ತಾಲೂಕಿನಲ್ಲಿ ಜೆಡಿಎಸ್ ಸದೃಢವಾಗಿ ಸಂಘಟನೆಗೊಂಡಿದೆ. ಇದರೊಂದಿಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಸೇರ್ಪಡೆಗೊಂಡ ಮಾಜಿ ಶಾಸಕ ಎಸ್.ಪಿ.ಮುದ್ದಹನುಮೇಗೌಡರನ್ನು ಬೆಂಬಲಿಸಿ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡಿದ್ದು, ಪ್ರಸಕ್ತ ಚುನಾವಣೆಯಲ್ಲಿ ಮುದ್ದುಹನುಮೇಗೌಡ, ಅನಸೂಯಮ್ಮ ವೈ.ಕೆ.ಆರ್ ಅವರ ಸಹಕಾರದೊಂದಿಗೆ ಚುನಾವಣೆ ಎದುರಿಸಿ ಅತ್ಯಧಿಕ ಮತಗಳ ಅಂತರದಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ಎಂದರು. ಪಕ್ಷದಲ್ಲಿ ಯಾವುದೇ ರೀತಿಯ ಬಂಡಾಯ, ಅಸಹಕಾರ, ಭಿನ್ನಾಭಿಪ್ರಾಯಗಳಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವದೆ ನಮ್ಮ ಗುರಿ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್, ಪ್ರಮುಖರಾದ ಡಾ.ಬಿಎನ್.ರವಿ, ಜಗದೀಶ್, ಲೋಕೇಶ್, ರಮೇಶ್, ತಮ್ಮಣ್ಣ, ಆಯಿಶಾಬೀ, ನರಸಿಂಹಮೂರ್ತಿ, ಈ,ಮಂಜು, ಹಮೀದ್, ಸುರೇಶ್ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.