ತುಮಕೂರು

ಭಾರಿ ಮೆರವಣಿಗೆ ನಡುವೆ ಜಯಚಂದ್ರ ನಾಮಪತ್ರ ಸಲ್ಲಿಕೆ

Published On :

ಕ.ಪ್ರ. ವಾರ್ತೆ  ಶಿರಾ  ಏ.17
ಶಾಸಕ ಟಿ.ಬಿ.ಜಯಚಂದ್ರ ಬುಧವಾರ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು.  ಬೆಂಬಲಿಗರ  ಭಾರಿ ಮೆರವಣಿಗೆ ನಡುವೆ ಜಯಚಂದ್ರ ಅವರು ಪಟ್ಟಣದ ಮಲ್ಲಿಕ್ ರೆಹಾನ್ ದರ್ಗಾದಲ್ಲಿ ಪೂಜೆ ಸಲ್ಲಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಳ, ಮದ್ದಳೆ ನಡುವೆ ಜನರ ಹರ್ಷೋದ್ಗಾರದೊಂದಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಮಯದಲ್ಲಿ ಗುಳಿಗೇನಹಳ್ಳಿ ನಾಗರಾಜು, ಜಿ.ಪಂ. ಸದಸ್ಯ ಅರೇಹಳ್ಳಿ ರಮೇಶ್ ಎ.ಪಿ.ಎಂ.ಸಿ. ಅಧ್ಯಕ್ಷ ಶಶಿಧರ ಗೌಡ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಕಾಂಗ್ರೆಸ್ ವಕ್ತಾರ ಡಿ.ಸಿ.ಅಶೋಕ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪ್ಯಾರು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂಗಾವರ ಮಾರಣ್ಣ, ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು  ಜನ ಸೇರಿದ್ದರು. ಶಿರಾ ನಗರ ಠಾಣಾ ಸಿ.ಪಿ.ಐ. ಪ್ರಹ್ಲಾದ್, ಗ್ರಾಮಾಂತರ ಸಿ.ಪಿ.ಐ. ಪಿ.ರವಿ ಮತ್ತು ಅರೆಸೇನಾ ಪಡೆ ಪಟ್ಟದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.