ಪಾವಗಡ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ನಾಮಪತ್ರ
ಕ.ಪ್ರ. ವಾರ್ತೆ ಪಾವಗಡ ಏ.18
ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರದ ವಾಹನದಲ್ಲಿ ರೋಡ್ ಶೋ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್ ಬುಧವಾರ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ಪಾವಗಡ ಕ್ಷೇತ್ರದ ಸ್ಪರ್ಧೆ ಬಯಸಿ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್ ನಾಮ ಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ತಾಲೂಕಿನದ್ಯಂತ ಸಾಗರೋಪಾಧಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಟ್ಟಣಕ್ಕೆ ಆಗಮಿಸಿ
ಬೆಂಬಲ ವ್ಯಕ್ತಪಡಿಸಿದರು. ಪಟ್ಟಣದ ಚಳ್ಳಕೆರೆ ಕ್ರಾಸ್‌ನಿಂದ ಅರಸೀಕೆರೆ ರಸ್ತೆಯ ಶ್ರೀನಿವಾಸ ಟಾಕೀಸ್‌ವರೆಗೆ ಕಾರ್ಯಕರ್ತರು ಅಭಿಮಾನಿಗಳು ಸೇರಿದರು. ಚಳ್ಳಕೆರೆ ರಸ್ತೆಯಲ್ಲಿ 1ಗಂಟೆಗೊ ಹೆಚ್ಚುಕಾಲ ಟ್ರಾಫಿಕ್ ಜಾಮ್ ಆಗಿ ಬಸ್‌ಗಳು ಸೇರಿದಂತೆ ವಿವಿಧ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆ ಆಗಿ ದೂರದ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗ ಹೋಗಬೇಕಾದ ಪ್ರಯಾಣಿಕರಿಗೆ ಸಮಸ್ಯೆ ಅನುಭವಿಸಿದರು. ಅಹಿತರಕ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತ ವಾತಾವರಣ ಕಲ್ಪಿಸುವಲ್ಲಿ ಯಶಸ್ವಿಯಾದ ಪೊಲೀಸರು ಪ್ರಯಾಣಿಕರ ಪ್ರಯಾಣಕ್ಕೆ ಸುರಕ್ಷೆತೆ ಕಲ್ಪಿಸಲು ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಹರಸಾಹಸಪಟ್ಟರು.
ಬೆಳಿಗ್ಗೆ 11ಗಂಟೆಗೆ ಪಟ್ಟಣದ ವೆಂಕಟೇಶ್ವರ ವಿದ್ಯಾ ಸಂಸ್ಥೆಯಿಂದ ಭಾರಿ ಸಂಖ್ಯೆ ಕಾರ್ಯಕರ್ತರೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕ ಸೋಮ್ಲಾನಾಯಕ್, ನರಸಿಂಹಯ್ಯ, ಪಕ್ಷದ ತಾಲೂಕು ಅಧ್ಯಕ್ಷ ಸುದೇಶ್‌ಕುಮಾರ್, ಹಿರಿಯ ಮುಖಂಡ ಮಾನಂ ವೆಂಕಟಸ್ವಾಮಿ ಹಾಗೂ ಅಭ್ಯರ್ಥಿ ಎಚ್.ವಿ. ವೆಂಕಟೇಶ್ ಚುನಾವಣೆ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಗಂಗಯ್ಯ ಅವರಿಗೆ ನಾಮಪತ್ರ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

