ತುಮಕೂರು

ನಮ್ಮ 'ಕೈ'ಲಿ ಬಂಡಾಯ, ಬಣಗಳಿಲ್ಲ: ಸತೀಶ್ ಸಾಸಲು

Published On :

ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್‌ನಲ್ಲಿ ಯಾವುದೇ ಬಂಡಾಯ ಮತ್ತು ಬಣಗಳಾಗಲಿ ಇಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್. ಸತೀಶ್ ಸಾಸಲು ತಿಳಿಸಿದರು.
ಅವರು ಟಿಕೆಟ್ ಹಂಚಿಕೆ ವಿಷಯದಲ್ಲಿ ಅಸಮಾಧಾನಗೊಂಡಿದ್ದ ಕೆಲವು ಕಾಂಗ್ರೆಸ್ ಮುಖಂಡರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಭಾನುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಬೃಹತ್ ಆಲದ ಮರವಿದ್ದಂತೆ. ಇಲ್ಲಿ ಸ್ವಲ್ಪ ಮಟ್ಟಿನ ಭಿನ್ನಾಭಿಪ್ರಾಯ ಬರುವುದು ಸಹಜ. ಆದರೆ ಅದನ್ನು ನಮ್ಮಲ್ಲಿ ಪಕ್ಷಕ್ಕೆ ಕೆಡುಕಾಗುವ ರೀತಿಯಲ್ಲಿ ಯಾರು ಬೆಳೆಸುವುದಿಲ್ಲ. ಆದ್ದರಿಂದ ಸದ್ಯದ ಚುನಾವಣೆಯಲ್ಲಿ ಪಕ್ಷದ ಮುಖಂಡರೆಲ್ಲಾ ಒಟ್ಟಿಗೆ ಸೇರಿ ಚುನಾವಣೆ ಕಾರ್ಯದಲ್ಲಿ ತೊಡಗುವುದಾಗಿ ತೀರ್ಮಾನಿಸಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವುದರಿಂದ ತಾಲೂಕಿನ ಅಭಿವೃದ್ಧಿ ಮಾಡಲು ಸಹಾಯಕವಾಗುತ್ತದೆ ಎಂದರು.
ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ಕಾಂಗ್ರೆಸ್ಸಿಗ ಸೀಮೆಎಣ  , ೆ ಕೃಷ  , ಯ್ಯ ಮಾತನಾಡಿ, ನಮ್ಮಲ್ಲಿ ಭಿನ್ನಾಭಿಪ್ರಾಯವಿರಬಹುದು, ಬಂಡಾಯಕ್ಕೆ ಆಸ್ಪದವೇ ಇಲ್ಲ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಟ್ಟಾಗಿ ಸೇರಿ ಪಕ್ಷದ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತವೆ. ಕಾಂಗ್ರೆಸ್ ಎಂಬ ರಥಕ್ಕೆ ನಾವು ಉತ್ತಮ ಸಾರಥಿಯಾಗಲು ಬಯಸುತ್ತೇನೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಬಸವರಾಜು ಮಾತನಾಡಿ  ಕಾಂಗ್ರೆಸ್ ಅಭ್ಯರ್ಥಿ ಗೆಲವಿಗಾಗಿ ಎಲ್ಲರೂ ಸೇರಿ ಹೋರಾಟ ಮಾಡುತ್ತೇವೆ. ನಮ್ಮ ತಾಲೂಕು ಬಹಳ ಹಿಂದುಳಿದಿದೆ. ಈ ಬಾರಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದರಿಂದ ಕಾಂಗ್ರೆಸ್ ಗೆಲ್ಲಿಸಿ ತಾಲೂಕಿನ ಅಭಿವೃದ್ಧಿಗೆ ಸಹಕರಿಸಿ ಎಂದರು.
ಈ ಸಂದರ್ಭದಲ್ಲಿ ಎಸ್ಸಿ ಮುಖಂಡ ಸರಮೇಶ್ವರಯ್ಯ, ಯಳನಡು ವೈಸಿ ಸಿದ್ರಾಮಯ್ಯ, ಮಹಾಲಿಂಗನಾಯ್ಕ, ಕೆ.ಜಿ.ಕೃಷ  , ೇಗೌಡ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.