ಹಾದಿ ತಪ್ಪಿಸಿದ ಶಾಸಕದ್ವಯರು
ಕ.ಪ್ರ. ವಾರ್ತೆ , ತುಮಕೂರು , ಏ.21
ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ಬಾಬು ಹಾದಿ ತಪ್ಪಿಸಿದ್ದಾರೆ ಎಂದು ಜೆಡಿಎಸ್ ನಗರ ಘಟಕದ ಮಾಜಿ ಅಧ್ಯಕ್ಷ ವಿಜಯಪ್ರಕಾಶ್ ಮಿರ್ಜಿ ಆರೋಪಿಸಿದರು.
ಅವರು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಏರ್ಪಾಟಾಗಿದ್ದ ಸುದ್ದಿಗೋಷ್ಠಿಯ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು.
ಜೆಡಿಎಸ್ನಲ್ಲಿ ಸಚ್ಚಾರಿತ್ರ್ಯ ಉಳ್ಳವರಿಗೆ, ಅವಕಾಶವಿಲ್ಲ. 2004 ರಿಂದಲೂ ತಾವು ತುಮಕೂರು ನಗರ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ತಮ್ಮ ವಿರುದ್ದ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಈ ಬಾರಿ ಕೂಡ ಟಿಕೆಟ್ ಕೇಳಿದೆ. ಗೆಲ್ಲುವ ಸಾಧ್ಯತೆ ಹೆಚ್ಚಿತ್ತು. ಆದರೆ ಈ ಬಾರಿ ಕೂಡ ಟಿಕೆಟ್ ತಪ್ಪಿಸಿದರು. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬಗ್ಗೆ ಗೌರವ ಇದ್ದೇ ಇದೆ. ಆದರೆ ಸ್ಥಳೀಯ ನಾಯಕರ ಪಿತೂರಿಯಿಂದಾಗಿ ಜೆಡಿಎಸ್ ಜಿಲ್ಲೆಯಲ್ಲಿ ಹಾದಿ ತಪ್ಪಿದೆ. ಗೆಲ್ಲುವ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿದೆ. ಗೌರವ ಇಲ್ಲದ ಕಡೆ ಇರೋದು ಬೇಡ ಎಂದು ತೀರ್ಮಾನಿಸಿ, ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.
ತಾವು ಸೇರಿದಂತೆ ಜೆಡಿಎಸ್ನ ನಿಷ್ಠಾವಂತ 20 ಮುಖಂಡರು ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅವರನ್ನೆಲ್ಲಾ ಮೂಲೆಗುಂಪು ಮಾಡಲಾಗಿದೆ. ತಮ್ಮೊಂದಿಗೆ ಜೆಡಿಎಸ್ನ ನೂರಾರು ಕಾರ್ಯಕರ್ತರು ಇದ್ದಾರೆ. ಶೀಘ್ರದಲ್ಲೇ ಅವರೆಲ್ಲಾ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದರು.
ಜೆಡಿಎಸ್ ಖಾಲಿ: ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ಮಾತನಾಡಿ, ಮಿರ್ಜಿ ಕಾಂಗ್ರೆಸ್ಗೆ ಬಂದಿರುವುದು ಆನೆ ಬಲ ಬಂದಂತಾಗಿದೆ. ಶೀಘ್ರದಲ್ಲೇ ತುಮಕೂರು ನಗರ ಜೆಡಿಎಸ್ ಶೇ. 100 ರಷ್ಟು ಖಾಲಿಯಾಗಲಿದ್ದು, ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

