ತುಮಕೂರು

ತುಮಕೂರು: ಕೆಜೆಪಿ ಪದಾಧಿಕಾರಿಗಳು

Published On :

ತುಮಕೂರು: ಕರ್ನಾಟಕ ಜನತಾ ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ  ಉಪಾಧ್ಯಕ್ಷರಾಗಿ ಎನ್. ನಾಗರಾಜ್ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಮೋಹನ್ ಎಂ. ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ತಿಳಿಸಿದ್ದಾರೆ.

ಇಂದಿನಿಂದ ನಾಡಗೌಡ ಪ್ರವಾಸ
ತುಮಕೂರು: ಜೆಡಿಯು ರಾಜ್ಯಾಧ್ಯಕ್ಷ ಡಾ. ಎಂ.ಪಿ. ನಾಡಗೌಡ ಅವರು ಏ. 22 ರಿಂದ ಪಾವಗಡ ತಾಲೂಕಿನಿಂದ ಚುನಾವಣಾ ಪ್ರವಾಸ ಕೈಗೊಳ್ಳಲಿದ್ದಾರೆ. 22 ರಂದು ಬೆಳಗ್ಗೆ ಪಾವಗಡ ತಾಲೂಕಿನಿಂದ ಪ್ರವಾಸ ಮಾಡಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ವಾತ್ಸವ್, ಮಾಜಿ ಶಾಸಕ ಧರ್ಮಪ್ಪ, ಸಾವಿತ್ರಿ ಗುಂಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನರಫತ್ ಎಂ. ರಾಣಾವತ್, ಜಿಲ್ಲಾಧ್ಯಕ್ಷ ಕೆ.ಜಿ.ಎಲ್. ರವಿ ಅವರು ಕೂಡ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್‌ಗೆ ನೇಮಕ
ತುಮಕೂರು: ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಘಟನಾ ಕಾರ್ಯದರ್ಶಿಯಾಗಿ ಎ.ಎನ್. ಪ್ರಭಾಕರ್ ನಂದೀಶ್ ಅವರನ್ನು ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಕನ್ವೀನರ್ ಆಗಿ ಕುತುಬ್ ದೀನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಅವರು ತಿಳಿಸಿದ್ದಾರೆ.

ಸಿಪಿಐನಿಂದ ಉಚ್ಚಾಟನೆ
ತುಮಕೂರು: ಭಾರತ ಕಮ್ಯುನಿಸ್ಟ್ ಪಕ್ಷದ ಸದಸ್ಯ ಡಿ. ರೇಣುಕಪ್ಪ ಅವರು ಇತ್ತೀಚೆಗೆ ಪಕ್ಷ ವಿರೋಧಿ ಚಟವಟಿಕೆಗಳಲ್ಲಿ ತೊಡಗಿಕೊಂಡಿರುವುದರಿಂದ ಅವರನ್ನು ಪಕ್ಷದ ಜಿಲ್ಲಾ ಮಂಡಳಿಯು ಪಕ್ಷ ಉಚ್ಚಾಟಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಎಸ್‌ಆರ್ ಕಾಂಗ್ರೆಸ್‌ಗೆ ರಾಜಿನಾಮೆ
ತುಮಕೂರು: ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ನಗರ ಯುವ ಘಟಕದ ಅಧ್ಯಕ್ಷ ಎಂ. ಮಂಜುನಾಥ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪಕ್ಷದ ನಗರ ಘಟಕದ ಅಧ್ಯಕ್ಷರಾಗಿ ಈವರೆಗೆ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ದುಡಿದಿದ್ದು ಪಕ್ಷದ ಆಂತರಿಕ ಕಾರಣಗಳಿಂದಾಗಿ ಬಿಎಸ್‌ಆರ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ತುಮಕೂರು ನಗರ ಯುವಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.