ತುಮಕೂರು

'ಚಿಕ್ಕನಾಯಕನಹಳ್ಳಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ'

Published On :

ಹುಳಿಯಾರು:  ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಸರಕಾರ ರಾಜ್ಯಾದ್ಯಂತ ಯಾರೂ ಕೇಳಿರದ, ಕಂಡಿರದಷ್ಟು  ಅಭಿವೃದ್ಧಿ ಕಾರ್ಯಗಳನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಕಿರಣ್‌ಕುಮಾರ್ ತಿಳಿಸಿದ್ದಾರೆ.
ಪಕ್ಷದ ಆಡಳಿತದ ಬಗ್ಗೆ ಮತದಾರರ ಸಲಹೆ, ಸೂಚನೆ, ಸಹಕಾರ ಬೆಂಬಲವನ್ನು ಪಡೆಯುವ ನಿಟ್ಟಿನಲ್ಲಿ ಮನೆಮನೆಗೆ ಬಿಜೆಪಿ ಎಂಬ ವಿನೂತ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದ್ದು ಪ್ರತಿ ಮನೆ ಬಾಗಿಲಿಗೆ ಬಿಜೆಪಿ ಮುಖಂಡರು ಬರುತ್ತಿದ್ದು, ಅವರೊಂದಿಗೆ ತಾವು ಕೈಜೋಡಿಸಿ ಬಿಜೆಪಿಗೆ ಬೆಂಬಲ ನೀಡಿ ಅಡಳಿತ ನಡೆಸುವ ಕಾರ್ಯಕ್ಕೆ ಮುನ್ನುಡಿಯಾಗುವಂತೆ ಚಿ.ನಾ.ಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ ಕೋರಿದ್ದಾರೆ. ತಾವೂ ಮಾಜಿ ಶಾಸಕರಾಗಿದ್ದರೂ ತಾಲೂಕಿನ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಹೇಮಾವತಿ ನೀರನ್ನು ತಾಲೂಕಿನ 26 ಕೆರೆಗಳಿಗೆ ಹಾಯಿಸುವ ಮಹತ್ವದ ಯೋಜನೆ ಅನ್ವಯ  ನೀರು ಹರಿಸುವ ಕಾರ್ಯಕ್ಕೆ 102ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ ಕಾಮಗಾರಿ ಚಾಲನೆಗೊಂಡಿದೆ. ಕೆಲ ತಿಂಗಳುಗಳಲ್ಲಿ  ನೀರು ಹರಿಯುತ್ತದೆ ಎಂದರು.   
ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳು: ಈಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಚಿ.ನಾ.ಹಳ್ಳಿ ಕ್ಷೇತ್ರವನ್ನು  ಸಮಗ್ರ ಅಭಿವೃದ್ಧಿಗೊಳಿಸುವುದೇ ತಮ್ಮ ಗುರಿಯಾಗಿದ್ದು, ಹಲವಾರು ಯೋಜನೆಗಳನ್ನು ಕೈಗೊಳ್ಳುವುದಾಗಿದೆ. ಅಂತೆಯೇ ತಾಲೂಕಿನ ಎಲ್ಲಾ ಹೋಬಳಿ, ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರಂತರಜ್ಯೋತಿ ಯೋಜನೆ, ಕೆ.ಎಸ್.ಆರ್.ಟಿ.ಸಿ ಡಿಪೋ, ಗ್ರಾಮಾಂತರ ಬಸ್ಸುಗಳ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.