ತುಮಕೂರು

ಕಾಂಗ್ರೆಸ್ ಗೆಲವು ಖಚಿತ: ಕೆ.ಎಸ್.ಎಸ್

Published On :

ತಿಪಟೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತಿಪಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದು ತಾಲೂಕು ಕಾಂಗ್ರೆಸ್ ವಕ್ತಾರ ಕೆ.ಎಸ್.ಸದಾಶಿವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 ತಾಲೂಕಿನ ಕಿಬ್ಬನಹಳ್ಳಿ, ನೊಣವಿನಕರೆ, ಹೊನ್ನವಳ್ಳಿ, ಕಸಬಾ ಹೋಬಳಿ ಹಾಗೂ ನಗರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಷಡಕ್ಷರಿ ಪರ ಮತಯಾಚಿಸಿ ಮಾತನಾಡಿದ ಅವರು ಈ ಹಿಂದೆ ಕೆ. ಷಡಕ್ಷರಿಯವರು ಶಾಸಕರಾಗಿದ್ದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಅಕ್ಷರ ದಾಸೋಹ, ಮಹಿಳಾ ಅಭ್ಯುದಯಕ್ಕಾಗಿ ಸ್ತ್ರೀಶಕ್ತಿ ಸಂಘಗಳು, ರೈತರ ಆರೋಗ್ಯ ಕಾಪಾಡಲು ಯಶಸ್ವಿನಿ, ಕೃಷಿಕರಿಗೆ ಸಹಾಯವಾಗಲು ರೈತ ಸಂಪರ್ಕ ಕೇಂದ್ರ, ನಿವೇಶನ ರಹಿತ ಬಡವರಿಗೆ ನಿವೇಶನಗಳ ಮಂಜೂರು ಮಾಡಿಸಿರುವುದೂ ಸೇರಿದಂತೆ  ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿರುವುದರಿಂದ ಕೆ.ಷಡಕ್ಷರಿಯವರು ಗೆಲವು ಸಾಧಿಸಲಿದ್ದಾರೆಂದು ಸದಾಶಿವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.